ಮಂಗಳೂರು: ನಗರದ ಮೀನುಗಾರಿಕಾ ದಕ್ಕೆಯ ಬಳಿಯ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ನಾಸಿರ್ ಯಾನೆ ದಕ್ಕೆ ನಾಸಿರ್ ಕೊಲೆಯಾದ ವ್ಯಕ್ತಿ. ಈತ ಹಲವಾರು ಕಳ್ಳತನ, ದರೋಡೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯಾಗಿದ್ದಾನೆ. ಈತನನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನದಿಗೆ ಹಾಕಿರುವ ಶಂಕೆ ವ್ಯಕ್ತವಾಗಿದೆ. ಆತನ ಹಣೆ ಮತ್ತು ದೇಹದಲ್ಲಿ ಗಾಯದ ಗುರುತಿದೆ. ದಕ್ಕೆಯ ಸಮೀಪ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನದಿಯ ಪಕ್ಕ ಶವ ಪತ್ತೆಯಾಗಿರುವುದಾಗಿದೆ.
ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.




