Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ
    ಇತ್ತೀಚಿನ ಸುದ್ದಿ

    ಮಂಗಳೂರು: 16 ಫಿಶ್ ಮೀಲ್ ಸ್ಥಗಿತಕ್ಕೆ ಆದೇಶ

    August 18, 2022
    Share

    ಮಂಗಳೂರು:  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜಲ ಮತ್ತು ವಾಯು ಸಂರಕ್ಷಣೆ ಹಾಗೂ ನಿಯಂತ್ರಣ ಕಾಯ್ದೆ ಉಲ್ಲಂಘನೆ ಮಾಡಿರುವ ಹಿನ್ನಲೆಯಲ್ಲಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮಿಲ್ ಘಟಕಗಳ ಸ್ಥಗಿತಕ್ಕೆ ಆದೇಶ ಹೊರಡಿಸಿದೆ.ಫಿಶ್ ಮಿಲ್ ಮುಚ್ಚುವಂತೆ ದ.ಕ. ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರು ಆದೇಶಿಸಿದ್ದರು. ಮೆಸ್ಕಾಂ ಎಂಡಿಗೆ ಕಾರ್ಖಾನೆಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚನೆ ನೀಡಲಾಗಿತ್ತು.

    ಮಂದಿನ ಆದೇಶದ ವರೆಗೆ ಘಟಕ ಸ್ಥಗಿತಗೊಳಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆನೀರು ಮತ್ತು ತೀವ್ರ ಪರಿಸರ ಮಾಲಿನ್ಯದ ಬಗ್ಗೆ ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಪದೇ ಪದೇ ನೋಟಿಸ್ ಕೊಟ್ಟು ಮಾಲಿನ್ಯ ತಗ್ಗಿಸಲು ಮಂಡಳಿ ಸೂಚಿಸಿತ್ತು. ಮಂಡಳಿ ನೋಟಿಸ್​ಗೆ ಫಿಶ್ ಮಿಲ್ ಘಟಕಗಳ ಮಾಲೀಕರು ನಿರ್ಲಕ್ಷ್ಯ ವಹಿಸಿದ್ದರು. ಮಲಿನ ನೀರನ್ನು ನೇರವಾಗಿ ಸಮುದ್ರಕ್ಕೆ ಬಿಡುತ್ತಿದ್ದರಿಂದ ಗಬ್ಬು ವಾಸನೆ ಹೊಡೆಯುತ್ತಿತ್ತು. ಹೀಗಾಗಿ ಈಗ ಮಾಲಿನ್ಯ ಮಂಡಳಿ ಈ ಆದೇಶ ಹೊರಡಿಸಿದೆ.ಅಸಹ್ಯ ವಾಸನೆಯಿಂದಾಗಿ ಪರಿಸರದ ಜನರಿಗೆ ವಾಸಕ್ಕೆ ಕಷ್ಟವಾಗಿತ್ತು. ಈ ಬಗ್ಗೆ ಪ್ರಾದೇಶಿಕ ಪರಿಸರ ನಿಯಂತ್ರಣ ಮಂಡಳಿಗೆ ಸಾರ್ವಜನಿಕರು ದೂರು ನೀಡಿದ್ದರು. ದೂರಿನ ಹಿನ್ನೆಲೆ ಬಯೋ ಫಿಲ್ಟರ್ ಅಳವಡಿಸಲು ಪರಿಸರ ನಿಯಂತ್ರಣ ಮಂಡಳಿ ಸೂಚಿಸಿತ್ತು.ಕಳೆದ ಜುಲೈನಲ್ಲಿ ಅಂತಿಮ ಗಡುವು ನೀಡಿ ನೋಟಿಸ್ ನೀಡಿತ್ತು. ಪರಿಸರ ಮಾಲಿನ್ಯ ತಪ್ಪಿಸಲು ಕಾರ್ಖಾನೆಗಳು ಯಾವುದೇ ಕ್ರಮ ಕೈಗೊಳ್ಳದೇ, ವಿಚಾರಣೆಗೂ ಹಾಜರಾಗದ ಹಿನ್ನೆಲೆ ಈ ಆದೇಶ ಹೊರಡಿಸಲಾಗಿದೆ.ಇನ್ನು ಆದೇಶದ ವಿರುದ್ದ ಫಿಶ್ ಮಿಲ್ ಮಾಲಕರು ನ್ಯಾಯಾಲಯ್ದ ಮೊರೆ ಹೋಗಿದ್ದು ಮಂಡಳಿ ನಿಯಾ ಪಾಲಿಸದೆ ಆದೇಶ ಹೊರಡಿಸಿದೆ ಎಂದು ವಾದಿಸಿದ್ದಾರೆ.

    Post Views: 177

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.