Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ನೈತಿಕ ಪೊಲೀಸ್‌ಗಿರಿ – ಐವರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಬಂಧನ
    ಇತ್ತೀಚಿನ ಸುದ್ದಿ

    ಕಾರ್ಕಳ: ನೈತಿಕ ಪೊಲೀಸ್‌ಗಿರಿ – ಐವರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರ ಬಂಧನ

    August 2, 2023
    Share

    ಕಾರ್ಕಳ: ಕಾರಿನಲ್ಲಿ ಹೋಗುತ್ತಿದ್ದ ವೈದ್ಯರು ಹಾಗೂ ಪ್ರಾಧ್ಯಾಪಕರನ್ನು ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ ನಡೆಸಿದ ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರನ್ನು ಬಂಧಿಸಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ಮಂಗಳೂರಿನ ಕಾಲೇಜೊಂದರ ನಾಲ್ವರು ವೈದ್ಯರು ಮತ್ತು ಅದೇ ಕಾಲೇಜಿನ ಇಬ್ಬರು ಮಹಿಳಾ ಪ್ರೊಫೆಸರ್ ಅವರೊಂದಿಗೆ ಒಂದೇ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಮಾಳ ಎಸ್ ಕೆ ಬಾರ್ಡರ್ ಬಳಿಯಿಂದ ಆರೋಪಿಗಳು ಇವರ ಕಾರನ್ನು ಹಿಂಬಾಲಿಸಿ ಮತ್ತೊಂದು ಕಾರಿನಲ್ಲಿ ಕಾರ್ಕಳದ ಕುಂಟಲ್ಪಾಡಿ ಎಂಬಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾರೆ.ಈ ವೇಳೆ ಕಾರಿನಲ್ಲಿದ್ದ ಮಹಿಳೆಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಂಗಳೂರಿನಿಂದ ಶೃಂಗೇರಿಗೆ ತೆರಳಿ ಕಾರ್ಕಳದ ಕುಂಟಲ್ಪಾಡಿ ಮಾರ್ಗವಾಗಿ ಮಂಗಳೂರಿಗೆ ತೆರಳುತ್ತಿದ್ದವರನ್ನು ವಿಭಿನ್ನ ಕೋಮಿನವರು ಎಂದು ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ ಮಿಯ್ಯಾರು, ಸಂದೀಪ್ ಪೂಜಾರಿ ಮಿಯ್ಯಾರು, ಸುಚಿತ್ ಸಫಲಿಗ ಆರೋಪಿಗಳು. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದಾರೆ.ಆರೋಪಿಗಳನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.

    Post Views: 232

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.