Facebook Twitter Instagram
    Sunday, May 31
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂತ್ರಾಲಯದಲ್ಲಿ ಜಲ ದುರಂತ: ಪೂಜೆ ಕಾರ್ಯಕ್ರಮಕ್ಕೆ ಬಂದಿದ್ದ ಐವರು ನೀರುಪಾಲು
    ಇತ್ತೀಚಿನ ಸುದ್ದಿ

    ಮಂತ್ರಾಲಯದಲ್ಲಿ ಜಲ ದುರಂತ: ಪೂಜೆ ಕಾರ್ಯಕ್ರಮಕ್ಕೆ ಬಂದಿದ್ದ ಐವರು ನೀರುಪಾಲು

    May 31, 2026
    Share

    ರಾಯಚೂರು : ರಾಜ್ಯದಲ್ಲಿ ಜಲ ದುರಂತಗಳ ಸರಣಿ ಮುಂದುವರಿದಿದ್ದು, ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಮತ್ತೋರ್ವ ಯುವತಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23) ಹಾಗೂ ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಅಪರ್ಣಾ ಎಂಬ ಯುವತಿ ಕೊನೆಯ ಕ್ಷಣದಲ್ಲಿ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಸಂಬಂಧಿಕರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದವರು ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ನದಿಯ ಆಳ ಹಾಗೂ ನೀರಿನ ಹರಿವಿನ ತೀವ್ರತೆಯ ಬಗ್ಗೆ ಅರಿವಿಲ್ಲದೆ ನೀರಿಗೆ ಇಳಿದ ಪರಿಣಾಮ ದುರಂತ ಸಂಭವಿಸಿದೆ ಎನ್ನಲಾಗಿದೆ.

    ಘಟನಾ ಸ್ಥಳದಲ್ಲಿ ರಾಘವೇಂದ್ರ ಮತ್ತು ಸಂಧ್ಯಾ ಅವರ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮೀನುಗಾರರು ಹಾಗೂ ರಕ್ಷಣಾ ತಂಡಗಳು ನದಿಯಲ್ಲಿ ನಿರಂತರ ಹುಡುಕಾಟ ನಡೆಸುತ್ತಿವೆ. ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 10

    karnataka PoliceInvestigation

    Related Posts

    ವೇಷ ಬದಲಿಸಿ ಪರಿಶೀಲಿಸಿದ ಪೊಲೀಸರಿಗೆ ಬಯಲಾಯ್ತು ಸತ್ಯ: ಇಬ್ಬರು ಹೋಟೆಲ್ ಮಾಲೀಕರ ಬಂಧನ

    May 31, 2026

    8 ಗಂಟೆಯ ಪ್ರಯಾಣ ಇನ್ನು 5 ಗಂಟೆಗೆ: ಮಂಗಳೂರು-ಬೆಂಗಳೂರು ವಂದೇ ಭಾರತ್‌ಗೆ ಗ್ರೀನ್ ಸಿಗ್ನಲ್

    May 31, 2026

    ಗನ್ ಲೈಸೆನ್ಸ್ ನವೀಕರಣ ಇನ್ನು ಸುಲಭ: ದಕ್ಷಿಣ ಕನ್ನಡದಲ್ಲಿ ಡಿಜಿಟಲ್ ಟ್ರ್ಯಾಕಿಂಗ್ ಆರಂಭ

    May 30, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.