Facebook Twitter Instagram
    Tuesday, August 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು
    ಇತ್ತೀಚಿನ ಸುದ್ದಿ

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026
    Share

    ಪಡುಬಿದ್ರೆ: ಹೆಬ್ರಿ ತಾಲೂಕಿನ ಮುದ್ರಾಡಿ ಹಾಗೂ ಮುನಿಯಾಲು ಪ್ರದೇಶದಲ್ಲಿ ರಬ್ಬರ್ ಮರಗಳನ್ನು ಕಡಿದು, ನಿಗದಿತ ಹಣ ಪಾವತಿಸದೆ ಮರದ ತುಂಡುಗಳನ್ನು ಲಾರಿಯಲ್ಲಿ ಸಾಗಿಸಿ ಪರಾರಿಯಾಗಲು ಯತ್ನಿಸಿದ ಆರೋಪ ಕೇಳಿಬಂದಿದೆ.

    ಈ ಹಿನ್ನೆಲೆಯಲ್ಲಿ ರಬ್ಬರ್ ಮರ ತುಂಬಿದ್ದ ಲಾರಿಯನ್ನು ಪಡುಬಿದ್ರೆ ಟೋಲ್‌ಗೇಟ್ ಬಳಿ ಪೊಲೀಸರು ತಡೆದು ನಿಲ್ಲಿಸಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

    ಮುದ್ರಾಡಿಯ ಸುಜಾತ ಶೆಟ್ಟಿ, ವಿಜೇಂದ್ರ ಶೆಟ್ಟಿ ಅವರ ಮನೆ, ಮುದ್ರಾಡಿಯ ಆಶಾ ಆಚಾರ್ ಅವರ ಮನೆ ಹಾಗೂ ಮುನಿಯಾಲಿನ ಸೀಜು ಎಂಬವರ ಜಾಗದಲ್ಲಿದ್ದ ರಬ್ಬರ್ ಮರಗಳನ್ನು ಶಕೀಮ್ ಮತ್ತು ರಮೇಶ್ ನೇತೃತ್ವದ ತಂಡ ಮುಂಗಡ ಹಣ ನೀಡಿ ಖರೀದಿಸಿತ್ತು ಎನ್ನಲಾಗಿದೆ. ಆದರೆ ಮರ ಕಟಾವು ಮಾಡಿದ ಬಳಿಕ ಬಾಕಿ ಹಣ ಪಾವತಿಸದೆ, ಮರದ ತುಂಡುಗಳನ್ನು ಸಾಗಿಸುವ ಸಂದರ್ಭದಲ್ಲಿ ಹಣ ನೀಡುವುದಾಗಿ ಹೇಳಲಾಗಿತ್ತು ಎಂದು ಆರೋಪಿಸಲಾಗಿದೆ.ಈ ಬಗ್ಗೆ ಮರ ನೀಡಿದವರು ಮೂರು ದಿನಗಳ ಹಿಂದೆಯೇ ಹೆಬ್ರಿ ಹಾಗೂ ಅಜೆಕಾರು ಪೊಲೀಸರಿಗೆ ದೂರು ನೀಡಿದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

    ಭಾನುವಾರ ತಮಿಳುನಾಡು ನೋಂದಣಿಯ ಲಾರಿಯಲ್ಲಿ ರಬ್ಬರ್ ಮರಗಳನ್ನು ತುಂಬಿಸಿ ಸಾಗಾಟಕ್ಕೆ ಯತ್ನಿಸಿದ ವೇಳೆ ಮಾಹಿತಿ ಪಡೆದುಕೊಂಡ ಪೊಲೀಸರು ಪಡುಬಿದ್ರೆ ಟೋಲ್‌ಗೇಟ್ ಬಳಿ ಲಾರಿಯನ್ನು ತಡೆದಿದ್ದಾರೆ. ಮರ ಮಾರಾಟ ಮಾಡಿ ಹಣ ಬಾಕಿಯಾಗಿರುವ ಆಶಾ ಆಚಾರ್, ಸುಜಾತ ಶೆಟ್ಟಿ ಹಾಗೂ ಸೀಜು ಮುನಿಯಾಲು ಸೇರಿದಂತೆ ಕುಟುಂಬಸ್ಥರು ಟೋಲ್‌ಗೇಟ್ ಬಳಿ ಲಾರಿಯ ಸಮೀಪವೇ ಕಾದು ಕುಳಿತಿದ್ದಾರೆ.

    ಸುಮಾರು ₹7 ಲಕ್ಷ ವಂಚನೆ ಯತ್ನದ ಆರೋಪ

    ಮರ ಮಾರಾಟ ಮಾಡಿದ ಮೂವರು ಕುಟುಂಬಗಳು ಹಾಗೂ ಮರ ಕಟಾವು ಮಾಡಿದ ಕಾರ್ಮಿಕರ ತಂಡಕ್ಕೂ ಹಣ ಪಾವತಿಸದೆ ವಂಚಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಒಟ್ಟು ಸುಮಾರು ₹7 ಲಕ್ಷ ಮೊತ್ತದ ವಂಚನೆಗೆ ಯತ್ನಿಸಲಾಗಿದೆ ಎಂದು ತಿಳಿದುಬಂದಿದೆ.

    ಘಟನೆ ಕುರಿತು ಮಾಹಿತಿ ಪಡೆದ ರಾಜ್ಯ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಸ್ಥಳಕ್ಕೆ ಧಾವಿಸಿ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್ ಅವರಿಗೂ ಮಾಹಿತಿ ನೀಡಿ ಲಾರಿಯನ್ನು ತಡೆದು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಗೆ ಭೇಟಿ ನೀಡಿದ ಮಂಜುನಾಥ ಪೂಜಾರಿ, ವಂಚನೆಗೊಳಗಾದವರಿಗೆ ಧೈರ್ಯ ತುಂಬಿ ನ್ಯಾಯ ದೊರಕಿಸುವ ಭರವಸೆ ನೀಡಿದ್ದಾರೆ.

    ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಒದಗಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ಇದೇ ವೇಳೆ, ರಬ್ಬರ್ ಮರ ಕಡಿದು ಹಣ ನೀಡದೆ ಸಾಗಾಟ ಮಾಡುವಂತಹ ದೊಡ್ಡ ಜಾಲ ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆಯೇ ಎಂಬ ಅನುಮಾನ ವ್ಯಕ್ತಪಡಿಸಿರುವ ಮಂಜುನಾಥ ಪೂಜಾರಿ, ಈ ಬಗ್ಗೆ ಪೊಲೀಸರ ಕಾರ್ಯವೈಖರಿಯ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಹೆಬ್ರಿ ಠಾಣೆಯಲ್ಲಿ ಮೂವರು ಹಾಗೂ ಅಜೆಕಾರು ಠಾಣೆಯಲ್ಲಿ ಓರ್ವರು ದೂರು ನೀಡಿದ್ದು, ಲಾರಿ ತಡೆದು ಕ್ರಮ ಕೈಗೊಳ್ಳುವಂತೆ ಪಡುಬಿದ್ರೆ ಠಾಣೆಗೂ ಮಾಹಿತಿ ನೀಡಲಾಗಿದೆ. ಮರ ಖರೀದಿಸಿದ

    Post Views: 8

    Related Posts

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು

    August 11, 2026

    ಬಂಟ್ವಾಳ ನ್ಯಾಯಾಲಯದ ನ್ಯಾಯಾಂಗ ಬಂಧನ ಆದೇಶಕ್ಕೆ ಮಧ್ಯಂತರ ತಡೆ: ಆರೋಪಿಗೆ ಬಿಡುಗಡೆ ಭಾಗ್ಯ-ಏನಿದು ಪ್ರಕರಣ?

    August 11, 2026

    ಉಡುಪಿ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ..!!

    August 10, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಶಾಲಾ ಬಸ್ ಢಿಕ್ಕಿ..!! 15ಕ್ಕೂ ಹೆಚ್ಚು ಮಕ್ಕಳು ಪಾರು

    August 11, 2026

    ಮರ ಕಡಿದು ಹಣ ಕೊಡದೆ ಎಸ್ಕೇಪ್: ಪಡುಬಿದ್ರೆ ಟೋಲ್‌ಗೇಟ್‌ನಲ್ಲಿ ಲಾರಿ ಅಡ್ಡಗಟ್ಟಿದ ಪೊಲೀಸರು

    August 11, 2026

    ಬಂಟ್ವಾಳ ನ್ಯಾಯಾಲಯದ ನ್ಯಾಯಾಂಗ ಬಂಧನ ಆದೇಶಕ್ಕೆ ಮಧ್ಯಂತರ ತಡೆ: ಆರೋಪಿಗೆ ಬಿಡುಗಡೆ ಭಾಗ್ಯ-ಏನಿದು ಪ್ರಕರಣ?

    August 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.