Facebook Twitter Instagram
    Thursday, June 11
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡಿವೈಡರ್‌ಗಳ ಮೇಲಿನ ಫ್ಲೆಕ್ಸ್-ಬ್ಯಾನರ್‌ಗಳಿಗೆ ಡಿಸಿ ಬ್ರೇಕ್: ತಕ್ಷಣ ತೆರವುಗೊಳಿಸಲು ಆದೇಶ
    ಇತ್ತೀಚಿನ ಸುದ್ದಿ

    ಡಿವೈಡರ್‌ಗಳ ಮೇಲಿನ ಫ್ಲೆಕ್ಸ್-ಬ್ಯಾನರ್‌ಗಳಿಗೆ ಡಿಸಿ ಬ್ರೇಕ್: ತಕ್ಷಣ ತೆರವುಗೊಳಿಸಲು ಆದೇಶ

    June 11, 2026
    Share

    ಮಂಗಳೂರು: ದ.ಕ. ಜಿಲ್ಲೆಯ ಎಲ್ಲಾ ರಸ್ತೆಗಳ ಡಿವೈಡರ್‌ಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವುಗೊಳಿಸಲು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್. ವಿ. ಸೂಚನೆ ನೀಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ಚುರುಕುಗೊಂಡಿದ್ದು, ಮಳೆಗಾಲದ ಸಂದರ್ಭದಲ್ಲಿ ಗಾಳಿ ಮತ್ತು ಮಳೆಯ ಪರಿಣಾಮದಿಂದ ರಸ್ತೆಗಳಲ್ಲಿ ವಿಶೇಷವಾಗಿ ರಸ್ತೆಗಳ ಡಿವೈಡರ್ ಗಳಿಗೆ ಅಳವಡಿಸಲಾಗಿರುವ ಪ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳು ಕಳಚಿ ವಾಹನಗಳ ಮೇಲೆ ಮತ್ತು ಪಾದಚಾರಿಗಳ ಮೇಲೆ ಬೀಳುವುದರಿಂದ ಅಪಘಾತಗಳು, ಜೀವಹಾನಿಗಳು ಸಂಭವಿಸುವ ಸಾಧ್ಯತೆ ಇರುತ್ತದೆ.ಮಂಗಳೂರು ಮಹಾನಗರ ಪಾಲಿಕೆ ಸಹಿತ ಜಿಲ್ಲೆಯ ಎಲ್ಲಾ ನಗರ ಸ್ಥಳೀಯಾಡಳಿತ ಸಂಸ್ಥೆ ಹಾಗೂ ಗ್ರಾಪಂ ವ್ಯಾಪ್ತಿಯ ರಸ್ತೆಯ ಡಿವೈಡರ್‌ಗಳ ಮೇಲೆ ಅಪಾಯಕಾರಿ ಹಾಗೂ ಅನಧಿಕೃತ ಫ್ಲೆಕ್ಸ್, ಬ್ಯಾನರ್‌ಗಳನ್ನು ಅಳವಡಿಸಲಾಗಿದೆ. ಇದರಿಂದ ರಸ್ತೆ ದಾಟುವವರಿಗೆ ಮತ್ತು ವಾಹನಿಗರಿಗೆ ಸಮಸ್ಯೆಯಾಗಿದೆ. ಅಪಘಾತಕ್ಕೂ ಕಾರಣವಾಗಿದೆ. ಈ ಬಗ್ಗೆ ಈಗಾಗಲೆ ಜಿಲ್ಲಾಡಳಿತಕ್ಕೆ ಸಾಕಷ್ಟು ದೂರುಗಳೂ ಬಂದಿವೆ. ರಸ್ತೆ ಸುರಕ್ಷಾ ಸಮಿತಿಯ ಸಭೆಯಲ್ಲೂ ವಿಸ್ತೃತ ಚರ್ಚೆ ನಡೆದಿದೆ. ಹಾಗಾಗಿ ತಕ್ಷಣ ಎಲ್ಲಾ ಫ್ಲೆಕ್ಸ್ ಬ್ಯಾನರ್‌ಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

    Post Views: 7

    karnataka PoliceInvestigation

    Related Posts

    ವಿದ್ಯುತ್ ಸಂಪರ್ಕ ಸರಿಪಡಿಸಿದ ಬಳಿಕ ಬೈಕ್‌ನಲ್ಲೇ ಕುಸಿದ ಮೆಸ್ಕಾಂ ಉದ್ಯೋಗಿ

    June 11, 2026

    ಸ್ಥಾಯಿ ವಾರಂಟ್ ಜಾರಿಯಲ್ಲಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ

    June 11, 2026

    2023ರ ಅತ್ಯಾಚಾರ ಪ್ರಕರಣಕ್ಕೆ ಹೊಸ ತಿರುವು; ಆರೋಪಿಯ ಬಂಧನ

    June 11, 2026
    About
    About

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ವಿದ್ಯುತ್ ಸಂಪರ್ಕ ಸರಿಪಡಿಸಿದ ಬಳಿಕ ಬೈಕ್‌ನಲ್ಲೇ ಕುಸಿದ ಮೆಸ್ಕಾಂ ಉದ್ಯೋಗಿ

    June 11, 2026

    ಡಿವೈಡರ್‌ಗಳ ಮೇಲಿನ ಫ್ಲೆಕ್ಸ್-ಬ್ಯಾನರ್‌ಗಳಿಗೆ ಡಿಸಿ ಬ್ರೇಕ್: ತಕ್ಷಣ ತೆರವುಗೊಳಿಸಲು ಆದೇಶ

    June 11, 2026

    ಸ್ಥಾಯಿ ವಾರಂಟ್ ಜಾರಿಯಲ್ಲಿದ್ದ ಆರೋಪಿ ಕೊನೆಗೂ ಪೊಲೀಸರ ಬಲೆಗೆ

    June 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.