ಮಂಗಳೂರು : ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ.

ಮಂಗಳೂರಿನ ಶಕ್ತಿನಗರದಲ್ಲಿರುವ ಸಿಟಿ ನರ್ಸಿಂಗ್ ಹಾಸ್ಟೆಲ್ ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ.