Facebook Twitter Instagram
    Sunday, September 13
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಇಡಿ ತನಿಖೆ ಸಂದರ್ಭ ಬಯಲಾದ ವಿದೇಶಿ ಕರೆನ್ಸಿ ದಂಧೆ
    ಇತ್ತೀಚಿನ ಸುದ್ದಿ

    ಬಂಟ್ವಾಳ: ಇಡಿ ತನಿಖೆ ಸಂದರ್ಭ ಬಯಲಾದ ವಿದೇಶಿ ಕರೆನ್ಸಿ ದಂಧೆ

    February 14, 2024
    Share

    ಬಂಟ್ವಾಳ: ಧರ್ಮಸ್ಥಳ ಬಸ್ ನಿಲ್ದಾಣದಲ್ಲಿ 42 ಸಿಮ್‌ ಕಾರ್ಡ್ ಜೊತೆ  ಸಿಕ್ಕಿಬಿದ್ದಿದ್ದ ಐವರು ಆರೋಪಿಗಳ ವಿಚಾರಣೆಯನ್ನು ಜಾರಿ ನಿರ್ದೇಶನಾಯಕ್ಕೆ ಒಪ್ಪಿಸಲಾಗಿದೆ. ಆರೋಪಿಗಳಿಗೆ ವಿದೇಶಿ ಕರೆನ್ಸಿ ದಂಧೆಯ ನಂಟು ಇರುವ ಅನುಮಾನದ ಹಿನ್ನಲೆಯಲ್ಲಿ ಇಡಿ ತನಿಖೆ ಆರಂಭಿಸಿದೆ.

    ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ತೋಟತ್ತಾಡಿ ಎಂಬಲ್ಲಿ ಸಿಮ್ ಖರೀದಿಸಿ ಬೆಂಗಳೂರಿಗೆ ಹೊರಟಿದ್ದವರನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದರು. ಫೆ.1 ರಂದು ಆರೋಪಿಗಳನ್ನು ಬಂಧಿಸಲಾಗಿದ್ದು, ನ್ಯಾಯಾಲಯದ ಮುಂದೆ ಹಾಜರು ಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು. ವಿಚಾರಣೆ ವೇಳೆ ಆರೋಪಿಗಳಿಗೆ ವಿದೇಶಿ ಕರೆನ್ಸಿ ದಂಧೆಯ ನಂಟು ಇರುವುದು ಬೆಳಕಿಗೆ ಬಂದಿತ್ತು.

    ಈ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಇಡಿ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಿ ಪತ್ರ ಬರೆದಿದ್ದರು. ಇದೀಗ ಇಡಿ ಅಧಿಕಾರಿಗಳು ಬಂಟ್ವಾಳದ ಡಿವೈಎಸ್‌ಪಿ ಕಚೇರಿಗೆ ಆರೋಪಿಗಳನ್ನು ಕರೆಯಿಸಿ ವಿಚಾರಣೆ ನಡೆಸಿದ್ದಾರೆ. ಇಡಿ ಅಧಿಕಾರಿಗಳು ಕೂಡಾ ಈ ಐವರ ಮೇಲೆ ಪ್ರಕರಣ ದಾಖಲಿಸಿಕೊಂಡು ಪ್ರತ್ಯೇಕ ತನಿಖೆ ಆರಂಭಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.

    ಐವರು ಯುವಕರು ಸಿಮ್‌ ಕಾರ್ಡ್ ಖರೀದಿಸಿದ ಖಚಿತ ಮಾಹಿತಿ ಪಡೆದು ಧರ್ಮಸ್ಥಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಫೆ.1 ರಂದು ಸಂಜೆ 4 ಗಂಟೆ ಸುಮಾರಿಗೆ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಹುಡುಕಾಟ ನಡೆಸಿದಾಗ ಐವರು ಪತ್ತೆಯಾಗಿದ್ದು, ಪೊಲೀಸರಿಗೆ ಸಿಕ್ಕಿ ಬಿದ್ದಿದ್ದರು. ಈ ವೇಳೆ ಯುವಕರ ಬ್ಯಾಗ್ ನಲ್ಲಿದ್ದ ಬೇರೆ ಬೇರೆ ವಿಳಾಸದ ಹೆಸರಿನಲ್ಲಿ ಅಕ್ರಮವಾಗಿ ಪಡೆದುಕೊಂಡಿದ್ದ 42 ಸಿಮ್ ಕಾರ್ಡ್ ಮತ್ತುp ಅವರ ಬಳಿ ಇದ್ದ ಮೊಬೈಲ್ ಫೋನ್ ವಶಕ್ಕೆ ಪಡೆದುಕೊಂಡಿದ್ದರು.

    Post Views: 344

    Related Posts

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026

    ಮಂಗಳೂರು: ನಾನು ಮೀಡಿಯಾದವನು ಎಂದು ಬೆದರಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ- ಪ್ರಕರಣ ದಾಖಲು

    September 12, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.