Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು
    ಇತ್ತೀಚಿನ ಸುದ್ದಿ

    ಉಳ್ಳಾಲ: ಅರಣ್ಯಾಧಿಕಾರಿ ಮನೆಗೆ ನುಗ್ಗಿ ನಗ-ನಗದು ದೋಚಿದ ಕಳ್ಳರು

    March 5, 2026
    Share

    ಉಳ್ಳಾಲ: ಅರಣ್ಯಾಧಿಕಾರಿಯ ಬಾಡಿಗೆ ಮನೆಯಿಂದ ಕಳ್ಳರು ನಗ, ನಗದು ದೋಚಿದ ಘಟನೆ ಅಂಬಿಕಾರೋಡ್‌ನ ಕಾಪಿಕಾಡು ಎಂಬಲ್ಲಿ ನಡೆದಿದೆ.

    ಕೋಟೆಕಾರು ಉಪ ವಲಯ ಅರಣ್ಯಾಧಿಕಾರಿ ಮೆಹಬೂಬ್ ಸಾಬ್ ಗುಡಿಹೊಲ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಕಳ್ಳರು ಹತ್ತೂವರೆ ಲಕ್ಷ ರೂ ಹಣ, 181 ಗ್ರಾಂ ಚಿನ್ನ, ಬೆಳ್ಳಿಯನ್ನು ‌ಮತ್ತು ಒಂದು ಬೈಕ್ ಅನ್ನು ಹೊತ್ತೊಯ್ದಿದ್ದಾರೆ. ಅವರು ತಮ್ಮ ಹುಟ್ಟೂರು ಕೊಪ್ಪಳಕ್ಕೆ ತೆರಳಿದ್ದ ‌ಸಂದರ್ಭದಲ್ಲಿ ಈ ಘಟನೆ ನಡೆದಿದೆ.

    ಮೆಹಬೂಬ್ ಸಾಬ್ ಇಂದು ತಮ್ಮ ಬಾಡಿಗೆ ಮನೆಗೆ ವಾಪಾಸ್ಸಾದ ಸಮಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳರ ಪಾಲಾಗಿರುವ ಹತ್ತುೂವರೆ ಲಕ್ಷ ರೂ. ಗಳನ್ನು ಅವರು ಬ್ಯಾಂಕಿನಿಂದ ಸಾಲ ಪಡೆದಿದ್ದರು ಎಂದು ತಿಳಿದು ಬಂದಿದೆ.

    ಕಳ್ಳತನ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಕಳ್ಳತನ ಯಾವಾಗ ನಡೆದಿದೆ ಎನ್ನುವುದರ ಸುಳಿವು ಅಕ್ಕಪಕ್ಕದಲ್ಲಿ ಸಾಕಷ್ಟು ಮನೆಗಳಿದ್ದರೂ ಸಿಕ್ಕಿಲ್ಲ. ಹತ್ತಿರದಲ್ಲಿ ಎಲ್ಲೂ ಸಿಸಿಟಿವಿ ಇಲ್ಲದೇ ಇದ್ದು ಕಳ್ಳತನ ಪ್ರಕರಣ ಬೇಧಿಸುವುದು ಸವಾಲಾಗಿ ಪರಿಣಮಿಸಿದೆ.

    Post Views: 132

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.