Facebook Twitter Instagram
    Thursday, October 22
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಮಂಗಳೂರು: ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಪೊಲೀಸರು ; ಜಮೀನು ಮುಟ್ಟುಗೋಲು, ಒಂದು ತಿಂಗಳಲ್ಲಿ ಐದು ಕಡೆ ಆಸ್ತಿ ಜಪ್ತಿ  
    Uncategorized

    ಮಂಗಳೂರು: ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಪೊಲೀಸರು ; ಜಮೀನು ಮುಟ್ಟುಗೋಲು, ಒಂದು ತಿಂಗಳಲ್ಲಿ ಐದು ಕಡೆ ಆಸ್ತಿ ಜಪ್ತಿ  

    October 17, 2025
    Share

    ಮಂಗಳೂರು : ಅಪರಾಧ ಪ್ರಕರಣಗಳಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿರುವ ಆರೋಪಿಗಳ ಬೆನ್ನು ಬಿದ್ದಿರುವ ಪೊಲೀಸರು ಸದ್ರಿ ಆರೋಪಿಗಳಿಗೆ ಜಾಮೀನು ನೀಡಿದ್ದ ಶ್ಯೂರಿಟಿದಾರರು ಮತ್ತು ಶ್ಯೂರಿಟಿಗಾಗಿ ನೀಡಿರುವ ಜಮೀನನ್ನು ಮುಟ್ಟುಗೋಲು ಹಾಕಲು ಕ್ರಮ ಕೈಗೊಂಡಿದ್ದಾರೆ. 

    ‘ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ತನಿಖೆಯನ್ನು ಪೂರೈಸಿ, ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ನಂತರ ಕೆಲವು ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾರೆ. ಸದ್ರಿ ಆರೋಪಿಗಳು ತಲೆಮರೆಸಿಕೊಂಡ ಪ್ರಕರಣಗಳಲ್ಲಿ ನ್ಯಾಯಾಲಯದಿಂದ ಆರೋಪಿಗಳ ಬಿಡುಗಡೆ ಸಮಯದಲ್ಲಿ ಶ್ಯೂರಿಟಿದಾರರು ಭದ್ರತೆಯ ಆಧಾರವಾಗಿ ನೀಡಿದ ಜಮೀನು/ಸೊತ್ತು ವಿವರಗಳನ್ನು ಸಂಗ್ರಹಿಸಲಾಗಿದೆ. 

    ನ್ಯಾಯಾಲಯದಿಂದ ಆದೇಶವನ್ನು ಪಡೆದು ಶ್ಯೂರಿಟಿದಾರರಿಗೆ ಸಂಬಂಧಿಸಿದ ಸೊತ್ತುಗಳನ್ನು ಮುಟ್ಟುಗೋಲು ಹಾಕಲು ಮತ್ತು ಅದಕ್ಕೆ ಆಧಾರವಾಗಿಟ್ಟಿದ್ದ ದಂಡವನ್ನು ವಸೂಲಿ ಮಾಡಲು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ಬಗ್ಗೆ ಮುಟ್ಟುಗೋಲು ಮಾಡಿರುವ ಆಸ್ತಿಯ ಆರ್.ಟಿ.ಸಿ. ಪತ್ರದಲ್ಲಿ ವಿವರಗಳನ್ನು ನಮೂದಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆ ಚಾಲ್ತಿಯಲ್ಲಿರುತ್ತದೆ.  

    ಕಳೆದ ಒಂದು ತಿಂಗಳಿನಿಂದ ಇಂತಹ 5 ಅಪರಾಧ ಪ್ರಕರಣಗಳಲ್ಲಿ ಶ್ಯೂರಿಟಿಗಾಗಿ ಇರಿಸಲಾಗಿದ್ದ ಆಸ್ತಿಯನ್ನು ಮುಟ್ಟುಗೋಲು ಹಾಕಿದ್ದು, ಎರಡು ಪ್ರಕರಣಗಳಲ್ಲಿ ನ್ಯಾಯಾಲಯದಿಂದ ದಂಡ ವಿಧಿಸಲಾಗಿದೆ. 4 ಪ್ರಕರಣಗಳಲ್ಲಿ ಮುಟ್ಟುಗೋಲು ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ರೀತಿಯ ಕಾರ್ಯಾಚರಣೆ ಆರಂಭವಾದ ಬಳಿಕ ಎರಡು ಪ್ರಕರಣಗಳಲ್ಲಿ ಆರೋಪಿಗಳು ಸ್ವತಃ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. 

    ಸದರಿ ಕಾರ್ಯಾಚರಣೆ ಮುಂದುವರಿದಿದ್ದು, ಸಾರ್ವಜನಿಕರು ಆರೋಪಿಗಳ ಪರ ಜಾಮೀನು ಕೊಡುವಾಗ ಆತನ ಪೂರ್ವಾಪರ ತಿಳಿದುಕೊಂಡು ಎಚ್ಚರ ವಹಿಸಬೇಕಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Post Views: 330

    Related Posts

    ನ್ಯಾಯಾಲಯಕ್ಕೆ ಹಾಜರಾಗದೆ ಆರು ವರ್ಷಗಳಿಂದ ಪರಾರಿಯಾಗಿದ್ದ ಆರೋಪಿ ವಶಕ್ಕೆ

    May 16, 2026

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಫೇಸ್‌ಬುಕ್‌ನಲ್ಲಿ ಬಂದಿದ್ದ APK ಫೈಲ್ ಡೌನ್‌ಲೋಡ್ ಮಾಡಿ ₹1.78 ಲಕ್ಷ. ಕಳೆದುಕೊಂಡ ವ್ಯಕ್ತಿ!!

    October 21, 2026

    ಕಡಬ: ವೃದ್ಧೆಯ ಮೇಲೆ ಕಲ್ಲು ಎಸೆದು ಹಲ್ಲೆ – ಸೊಸೆಯ ವಿರುದ್ಧ ಪ್ರಕರಣ ದಾಖಲು

    October 21, 2026

    ಮಂಗಳೂರು ದಸರಾ: ಇಂದು ಸಂಜೆ 4ರಿಂದ ವಾಹನ ಸಂಚಾರ ಮಾರ್ಗ ಬದಲಾವಣೆ

    October 21, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.