Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಸ್ಟಮ್ ಹೆಸರಿನಲ್ಲಿ 1.33 ಕೋಟಿ ರೂ. ವಂಚನೆ; ಪ್ರಕರಣ ದಾಖಲು..!
    ಇತ್ತೀಚಿನ ಸುದ್ದಿ

    ಉಡುಪಿ: ಕಸ್ಟಮ್ ಹೆಸರಿನಲ್ಲಿ 1.33 ಕೋಟಿ ರೂ. ವಂಚನೆ; ಪ್ರಕರಣ ದಾಖಲು..!

    August 14, 2024
    Share

    ಉಡುಪಿ: ಮುಂಬೈಯ ಕಸ್ಟಮ್ ಅಧಿಕಾರಿಗಳ ಹೆಸರಿನಲ್ಲಿ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿರುವ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿಯ ವೈದ್ಯರಾಗಿರುವ ಡಾ.ಅರುಣ್ ಕುಮಾರ್ (53) ಎಂಬವರಿಗೆ ಜು.29ರಂದು ಅಪರಿಚಿತರು ಕಸ್ಟಮ್ಸ್‌ನಿಂದ ಕರೆ ಮಾಡಿ, ನಿಮ್ಮ ಆಧಾರ್ ನಂಬ್ರ ಬಳಸಿ ಬುಕ್ ಆಗಿರುವ ಕೊರಿಯರ್‌ನಲ್ಲಿ 5 ಪಾಸ್‌ಪೋರ್ಟ್, 5 ಎಟಿಎಂ ಕಾರ್ಡ್, 200ಗ್ರಾಂ ಎಂಡಿಎಂಎ ಹಾಗೂ 5000 ಯುಎಸ್ ಡಾಲರ್ ಇದ್ದು, ಕೋರಿಯರ್ ಮುಂಬಯಿ ಕಸ್ಟಮ್ಸ್‌ರವರ ವಶದಲ್ಲಿ ಇರುವುದಾಗಿ ತಿಳಿಸಿದರು. ಅಂತಹ ಬುಕಿಂಗ್ ಮಾಡಿಲ್ಲ ಎಂದು ಅರುಣ್ ಕುಮಾರ್ ನಿರಾಕರಿಸಿದಾಗ, ಕರೆ ಮಾಡಿದವರು ಅವರನ್ನು ಹಾಟ್‌ಲೈನ್ ಮೂಲಕ ಹಿರಿಯ ಅಧಿಕಾರಿಗೆ ಸಂಪರ್ಕಿಸಿದರು. ಹಾಟ್‌ಲೈನ್‌ನಲ್ಲಿದ್ದ ವ್ಯಕ್ತಿ ಪೊಲೀಸ್ ಅಧಿಕಾರಿ ಎಂದು ನಂಬಿಸಿ ಅರುಣ್ ಕುಮಾರ್‌ ಅವರ ಆಧಾರ್ ಕಾರ್ಡ್ ದುರ್ಬಳಕೆಯ ಬಗ್ಗೆ ದೂರನ್ನು ಸ್ವೀಕರಿಸಲಾಗಿದೆ ಎಂದು ತಿಳಿಸಿದರು. ನಿಮ್ಮ ಆಧಾರ್ ಕಾರ್ಡ್‌ನ್ನು ಭಯೋತ್ಪಾದಕರು ಸಿಮ್ ಖರೀದಿಸಲು ಬಳಸಿದ್ದು, ಈ ದೂರಿಗೆ ಸಂಬಂಧಿಸಿ ನಿಮ್ಮನ್ನು ವರ್ಚುವಲ್ ಆರೆಸ್ಟ್ ಮಾಡುವುದಾಗಿ ತಿಳಿಸಿದ್ದರು. ಜು.29ರಿಂದ ಆ.9ರ ತನಕ ಅವರ ಮನೆಯ ರೂಮ್ ಒಂದರಲ್ಲಿ ಇರುವಂತೆ ಹಾಗೂ ಬೇರೆಯವರೊಂದಿಗೆ ಸಂಪರ್ಕಿಸದಂತೆ ಸೂಚಿಸಿದ್ದರು. ಈ ಪ್ರಕರಣವನ್ನು ಸರಿಪಡಿಸಲು ಅಪರಿಚಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಪಾವತಿಸುವಂತೆ ತಿಳಿಸಿದ್ದು ಅದರಂತೆ ಅರುಣ್ ಕುಮಾರ್, ಖಾತೆಯಿಂದ ಆ.6ರಿಂದ ಆ.9ರತನಕ ಹಂತ ಹಂತವಾಗಿ ಒಟ್ಟು 1,33,81,000 ರೂ. ಹಣವನ್ನು ವರ್ಗಾಯಿಸಿರುವುದಾಗಿ ದೂರಲಾಗಿದೆ.

    Post Views: 137

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.