ಬೆಳ್ತಂಗಡಿ : ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ವ್ಯಕ್ತಿಯೋರ್ವ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಉಜಿರೆ ಸಮೀಪ ಗುರಿಪಳ್ಳದಲ್ಲಿ ಸಂಭವಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಸತೀಶ್ ಗೌಡ ಹಣ ಕಳೆದುಕೊಂಡ ವ್ಯಕ್ತಿ. ಇವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಫೇಸ್‌ಬುಕ್ ಮೂಲಕ ಮಹಿಳೆಯೊಬ್ಬರ ಪರಿಚಯವಾಗಿದ್ದು, ಚಾಟಿಂಗ್ ಮೂಲಕ ಅವರ ವಿಶ್ವಾಸ ಗಳಿಸಿ ವಿವಿಧ ಕಾರಣಗಳನ್ನು ನೀಡಿ ಬೇರೆ ಬೇರೆ ಖಾತೆಗಳಿಗೆ ಒಟ್ಟು 6,96,500 ರೂ. ಹಣ ವರ್ಗಾಯಿಸಿಕೊಂಡು ಬಳಿಕ ವಂಚಿಸಿರುವುದಾಗಿ ದ.ಕ. ಜಿಲ್ಲಾ ಸೈಬರ್ ಕೈಂ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.