Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ
    ಇತ್ತೀಚಿನ ಸುದ್ದಿ

    ಉಡುಪಿ : ನಕಲಿ ಚಿನ್ನ ಅಡವಿಟ್ಟು ವಂಚನೆ, ಉತ್ತರ ಕನ್ನಡದ ನಾಲ್ವರ ಬಂಧನ

    March 7, 2024
    Share

    ಉಡುಪಿ ಜಿಲ್ಲೆಯ  ಪಡುಬಿದ್ರಿಯಲ್ಲಿ ಆರೋಪಿ ರಾಜೀವ್ 30ಗ್ರಾಂ ಗೋಲ್ಡ್ ನ ಚಿನ್ನಾಭರಣಗಳನ್ನು ಸ್ಥಳೀಯವಾಗಿ ಬ್ಯಾಂಕು, ಸೊಸೈಟಿಗಳಲ್ಲಿ ಅಡವಿಟ್ಟು ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಪ್ರಕರಣವನ್ನು ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಮತ್ತು ತಂಡ  ಬೇಧಿಸಿದ್ದಾರೆ.

    ರಾಜೀವ್‌ನಿಗೆ ಸಹಕರಿಸಿದ ಆರೋಪಿಗಳಾದ ಕುಮುಟಾದ ನಿತಿಲ್ ಭಾಸ್ಕರ್ ಶೇಟ್, ಸಂಜಯ್ ಶೇಟ್, ಮತ್ತು ಸಂತೋಷ್ ಶೇಟ್, ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ, ಎಂಬ ನಾಲ್ವರನ್ನು  ಬಂಧಿಸಿದ್ದಾರೆ.  ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಲಯವು ಆವರನ್ನು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಆರೋಪಿಗಳಿಂದ ನಕಲಿ 916 ಹಾಲ್‌ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್ ಕಂಪ್ಯೂಟರ್‌ಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ರಾಜೀವ್ 30 ಗ್ರಾಂ ಗೋಲ್ಡ್ ಬಳಸಿ20 ಗ್ರಾಂ ಚಿನ್ನಾಭರಣದೊಂದಿಗೆ ಗಲ್ ರಾಷ್ಟ್ರಕ್ಕೆ ಹೋಗುವ ಮತ್ತು ಅಲ್ಲಿಂದ ವಾಪಾಸಾಗುವ ವೇಳೆ 20 ಗ್ರಾಂ ಶುದ್ಧ ಚಿನ್ನದಾಭರಣವನ್ನೇ ಹಾಕಿಕೊಂಡು ಬರುವ ತನ್ನ ಪ್ಲಾನ್‌ಗೆ ಸಹಕರಿಸಲು ಪ್ರಕರಣದ ಇತರ ಆರೋಪಿಗಳಾದ ನಿತಿಲ್ ಭಾಸ್ಕರ್ ಶೇಟ್‌ನನ್ನು ಬಳಸಿಕೊಂಡಿದ್ದ. ಕುಮುಟಾದ ಇನ್ನಿಬ್ಬರು ಆರೋಪಿಗಳಿಂದ ನಕಲಿ ಚಿನ್ನದ ಆಭರಣಗಳನ್ನು ತಯಾರಿಸಿಕೊಂಡು ಬೆಳಗಾವಿಯಲ್ಲಿ ನಕಲಿ ಹಾಲ್‌ಮಾರ್ಕ್ ಮೊಹರನ್ನು ಹಾಕಲಾಗುತ್ತಿತ್ತು. ಆದರೆ ಆರೋಪಿ ರಾಜೀವ್ ತನ್ನ ಖತರ್‌ನಾಕ್ ಐಡಿಯಾವನ್ನು ಬದಲಾಯಿಸಿ, ಸ್ಥಳೀಯವಾಗಿ ಸೊಸೈಟಿ ಸಂಸ್ಥೆಗಳಿಗ ವಂಚನೆ ಮಾಡಲು ಶುರುವಿಟ್ಟು ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

    ಬ್ಯಾಂಕು, ಸೊಸೈಟಿಗಳಲ್ಲಿ ಚಿನ್ನಾಭರಣ ಈಡಿನ ಸಾಲವನ್ನಿತ್ತು ಮರಳಿ ಬಾರದೇ ಇದ್ದಾಗ ಏಲಂ ಪ್ರಕ್ರಿಯೆ ನಡೆಸಿ ಇದರಲ್ಲೂ ನಕಲಿ ಅಸಲಿಗಳನ್ನು ಪತ್ತೆ ಮಾಡಲಾಗಿರಲಿಲ್ಲ. ಕೇವಲ ಉಡುಪಿಯ ಬಿಡ್ಡುದಾರರೊಬ್ಬರು ಇದನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತು ಆತನ ಪತ್ನಿಯ ಚಿನ್ನಾಭರಣ ಸಾಲದ ವಂಚನೆ ಪ್ರಕರಣವು ಬೆಳಕಿಗೆಬಂತು. ವಿವಿಧ ಬ್ಯಾಂಕ್ ಗಳಲ್ಲಿ ಒಟ್ಟು 29.94 ಲಕ್ಷ ರೂ. ಗಳನ್ನು ರಾಜೀವ್ ದಂಪತಿ ಪಡೆದಿದ್ದರು.ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅರುಣ್ ಕುಮಾರ್, ಉಪ-ಅಧೀಕ್ಷಕ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಹಾಗೂ ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಅವರ ನಿರ್ದೇಶನದಂತೆ ಪಡುಬಿದ್ರಿ ಪಿಎಸ್‌ಐ ಪ್ರಸನ್ನ ಎಂ. ಎಸ್. ಹಾಗೂ ಅವರ ಸಿಬಂದಿಗಳು ಪ್ರಕರಣವನ್ನು ಬೇಧಿಸಿದ್ದು ಇನ್ನಷ್ಟು ತನಿಖೆ ಮುಂದುವರಿಸಿದ್ದಾರೆ.

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.