ಉಡುಪಿ: ಪೊಲೀಸ್ ಅಧಿಕಾರಿ ಎಂದು ನಂಬಿಸಿ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ರೂಪಾಯಿ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ವಿದ್ಯಾ ಎನ್ನುವವರಿಗೆ ಅಪರಿಚಿತ ವ್ಯಕ್ತಿಯೊಬ್ಬರು ಕರೆ ಮಾಡಿ ನಿಮ್ಮ ಆಧಾರ್ ನಂಬರ್ ಬಳಸಿ ಮುಂಬೈಯಲ್ಲಿ ಯಾರೋ ಸಿಮ್ ಖರೀದಿ ಮಾಡಿ ಅದರಲ್ಲಿ ಮೆಸೇಜ್ ಮತ್ತು ಟ್ರೇಡಿಂಗ್ ಮೆಸೇಜ್ ಕಳಿಸುತ್ತಿದ್ದು ನಿಮ್ಮ ಎಲ್ಲ ಮೊಬೈಲ್ ನಂಬರ್ ಲಾಕ್ ಮಾಡಲಾಗುವುದು ಎಂದು ಹೇಳಿದ ಬಳಿಕ ಕರೆಯನ್ನು ಸಹರಾ ಪೊಲೀಸ್ ಠಾಣೆಗೆ ವರ್ಗಾಯಿಸುವುದಾಗಿ ತಿಳಿಸಿದ ಅತ್ತ ಕಡೆಯಿಂದ ಮೋಹನ್ ಕುಮಾರ್ ಎಂಬಾತ ಮಾತನಾಡಿ, ತಾನು ಸಹರಾ ಪೊಲೀಸ್ ಠಾಣೆಯ ತನಿಖಾಧಿಕಾರಿ ಎಂದು ತಿಳಿಸಿ ನಿಮ್ಮ ಆಧಾರ್ ಕಾರ್ಡ್ ಮುಖಾಂತರ ಮುಂಬೈ ಎಸ್‌ಬಿಐ ಬ್ಯಾಂಕಿನಲ್ಲಿ ಖಾತೆ ತೆರದಿದ್ದು ಈ ಖಾತೆಯನ್ನು ಆಪರೇಟ್ ಮಾಡಿ ಸದರಿ ಖಾತೆಗೆ ಹ್ಯೂಮೆನ್ ಟ್ರಾಫಿಕಿಂಗ್ ಮತ್ತು ಮನಿ ಲ್ಯಾಂಡಿಂಗ್ ಮುಖಾಂತರ ಹಣ ವರ್ಗಾವಣೆ ಮಾಡಿರುತ್ತಾರೆ ಖಾತೆ ನಿಮ್ಮ ಹೆಸರಿನಲ್ಲಿ ಇರುವುದರಿಂದ ನಿಮ್ಮ ಎಲ್ಲ ಅಕೌಂಟ್ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ನಂಬಿಸಿದ್ದಾನೆ.
ಪೊಲೀಸ್ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿದ ವ್ಯಕ್ತಿ ನೀವು ಕೂಡ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗುತ್ತೀರಿ ಎಲ್ಲಿಗೂ ಹೋಗುವಂತಿಲ್ಲ ಎಲ್ಲಿಗಾದರೂ ಹೋಗುವುದಿದ್ದರು ನಮಗೆ ತಿಳಿಸಬೇಕು ಎಂದು ಬೆದರಿಸಿ ನಿಮ್ಮ ಎಲ್ಲಾ ಅಕೌಂಟ್ ಸೀಜ್ ಆಗುತ್ತದೆ ಆದ್ದರಿಂದ ನಿಮ್ಮ ಅಕೌಂಟ್ ನಲ್ಲಿರುವ ಎಲ್ಲಾ ಹಣವನ್ನು ನಾನು ಹೇಳಿದ ಯುಪಿಐ ನಂಬರಿಗೆ ಹಾಗೂ ಬ್ಯಾಂಕ್ ಖಾತೆಗೆ ಕಳುಹಿಸಿ ಎಂದು ತಿಳಿಸಿದ್ದಾನೆ
ಇದನ್ನು ನಂಬಿದ ವಿದ್ಯಾ ಹಂತ ಹಂತವಾಗಿ 19,71,629 ರೂ.ಗಳನ್ನು ವರ್ಗಾಯಿಸಿ ಹಣ ಕಳೆದುಕೊಂಡು ಮೋಸ ಹೋಗಿದ್ದಾರೆ. ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.