Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಪಾರ್ಟ್ ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಗೆ 28ಲಕ್ಷ ವಂಚನೆ
    ಇತ್ತೀಚಿನ ಸುದ್ದಿ

    ಮಂಗಳೂರು : ಪಾರ್ಟ್ ಟೈಮ್ ಜಾಬ್ ಆಫರ್ ನೀಡಿ ವ್ಯಕ್ತಿಗೆ 28ಲಕ್ಷ ವಂಚನೆ

    September 23, 2024
    Share

    ಮಂಗಳೂರು : ಪಾರ್ಟ್ ಟೈಂ ಜಾಬ್ ಆಫರ್ ನೀಡಿ ವ್ಯಕ್ತಿಯೊಬ್ಬರಿಗೆ 28 ಲಕ್ಷ ರೂಪಾಯಿ ವಂಚಿಸಿರುವ ಬಗ್ಗೆ ಕೋಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ. 2024 ಜುಲೈ 21ರಂದು ಸಂತ್ರಸ್ತ ವ್ಯಕ್ತಿಗೆ ಪಾರ್ಟ್ ಟೈಂ ಜಾಬ್ ಬಗ್ಗೆ ವಾಟ್ಸ್ಆ್ಯಪ್ ಮೆಸೇಜ್ ಬಂದಿತ್ತು. ಮೆಸೇಜ್‌ನಲ್ಲಿ ಟೆಲಿಗ್ರಾಂ ಆ್ಯಪ್ ತೆರೆದು ಲಿಂಕ್ ಕ್ಲಿಕ್ ಮಾಡಲು ತಿಳಿಸಿದ್ದರು. ಅದಕ್ಕೆ 123 ರೂ. ಪಾವತಿಸಿದ್ದು, ಆರೋಪಿಗಳು ತಿಳಿಸಿದಂತೆ ವಿಡಿಯೋದ ಸ್ಕ್ರೀನ್ ಶಾಟ್ ಕಳುಹಿಸಿದ್ದಕ್ಕೆ ಅವರಿಗೆ 130 ರೂ. ಹಾಕಿದ್ದರು. ಆ ಬಳಿಕ ಕಳುಹಿಸಿರುವ ವಿಡಿಯೋ ತಪ್ಪಾಗಿದೆಯೆಂದು ಮತ್ತೊಂದು ಲಿಂಕ್ ಕಳುಹಿಸಿದ್ದರು. ಅಲ್ಲದೆ ವ್ಯಕ್ತಿಗೆ ಹೆಚ್ಚಿನ‌ ಲಾಭದ ಆಮೀಷವೊಡ್ಡಿ 1 ಸಾವಿರ ಹಾಕಲು ಸೂಚಿಸಿದ್ದರು. ಅದರಲ್ಲಿ ಅವರಿಗೆ 1300 ರೂ. ಹಣ ಬಂದಿರುವುದು ತೋರಿಸಿತ್ತು. ಆ ಬಳಿಕ ವಂಚಕರ ಮಾತು ನಂಬಿ ಅವರು ನೀಡಿರುವ ಬೇರೆಬೇರೆ ಖಾತೆಗಳಿಗೆ ಒಟ್ಟು 28,18,065 ರೂ. ಹಣವನ್ನು ಪಾವತಿಸಿದ್ದಾರೆ. ಆದರೆ ಆ ಬಳಿಕ ಹಣ ಹಿಂದಿರುಗಿ ಪಾವತಿಯಾಗಲೇ ಇಲ್ಲ‌. ಇದರಿಂದ ಸಂತ್ರಸ್ತ ವ್ಯಕ್ತಿ ಮೋಸ ಹೋಗಿರುವುದು ಗೊತ್ತಾಗಿ ಪೊಲೀಸ್ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಕೋಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 192

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.