Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಧರ್ಮಸ್ಥಳದಲ್ಲಿ  51ನೇ  ವರ್ಷದ ಉಚಿತ ಸಾಮೂಹಿಕ ವಿವಾಹ ; ಮೇ.3 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ 201 ಜೋಡಿ
    ಇತ್ತೀಚಿನ ಸುದ್ದಿ

    ಧರ್ಮಸ್ಥಳದಲ್ಲಿ  51ನೇ  ವರ್ಷದ ಉಚಿತ ಸಾಮೂಹಿಕ ವಿವಾಹ ; ಮೇ.3 ರಂದು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ 201 ಜೋಡಿ

    May 2, 2023
    Share

    ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇದೀಗ ಮದುವೆ ಮನೆಯ ಸಂಭ್ರಮ, ಸಡಗರ ಮನೆ ಮಾಡಿದೆ.ಬುಧವಾರ ಸಂಜೆ ಗಂಟೆ 6.40 ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 201 ಜೋಡಿಗಳು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಲು ಈಗಾಗಲೇ ಹೆಸರು ನೋಂದಾಯಿಸಿದ್ದಾರೆ.

    ಮಂಗಳವಾರ ಅವರ ದಾಖಲೆಗಳನ್ನೆಲ್ಲಾ ಪರಿಶೀಲಿಸಿ ವಧುವಿಗೆ ಸೀರೆ ಮತ್ತು ರವಿಕೆ ಕಣ ಹಾಗೂ ವರನಿಗೆ ಧೋತಿ-ಶಾಲು ನೀಡಲಾಗುತ್ತದೆ. ಬುಧವಾರ ಸಂಜೆ 5 ಗಂಟೆಯಿಂದ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನಕ್ಕೆ ಹೋಗಲಿದ್ದಾರೆ.

    ಅಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆಯವರು, ಚಲನಚಿತ್ರ ನಟ ತೂಗುದೀಪ ದರ್ಶನ್ ಮೊದಲಾದ ಗಣ್ಯರು ಮಂಗಳಸೂತ್ರ  ವಿತರಿಸಲಿದ್ದಾರೆ. ವೇದ-ಮಂತ್ರ ಘೋಷ ಪಠಣದೊಂದಿಗೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ವಿವಾಹ ಸಮಾರಂಭವು ಅವರವರ ಜಾತಿ ಸಂಪ್ರದಾಯದಂತೆ ನಡೆಯುತ್ತದೆ. ಬಳಿಕ ದೇವರ ದರ್ಶನ ಮಾಡಿ ಅನ್ನಪೂರ್ಣ ಭೋಜನಾಲಯದಲ್ಲಿ ಮದುವೆ ಊಟ ಮಾಡಿ ನೂತನ ದಂಪತಿ ಅವರ ಊರಿಗೆ ತೆರಳಲಿದ್ದಾರೆ. ವರದಕ್ಷಿಣೆ ಹಾಗೂ ಮದುವೆಗಾಗಿ ಆಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಪ್ರಾರಂಭಿಸಿದ್ದು ಪ್ರತಿವರ್ಷ ನಡೆಸಲಾಗುತ್ತಿದೆ. ಕಳೆದ ವರ್ಷದವರೆಗೆ 12,576 ಜೋಡಿಗಳು ಧರ್ಮಸ್ಥಳದಲ್ಲಿ ವಿವಾಹವಾಗಿದ್ದು ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.

    Post Views: 216

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.