ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಕೃತ್ಯಗಳಿಗೆ ಬಳಸುತ್ತಿದ್ದ ಕಮ್ಯುನಿಟಿ ಹಾಲ್ ಅನ್ನು ಎಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಎನ್ ಐಎ ಅಧಿಕಾರಿಗಳು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಿತ್ತೂರಿನ ಫ್ರೀಡಂ ಕಮ್ಯುನಿಟಿ ಹಾಲ್ ಅನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು ಜುಲೈ 26ರಂದು ಹತ್ಯೆ ಮಾಡಲಾಗಿತ್ತು.