Facebook Twitter Instagram
    Sunday, March 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಬೇಕರಿ ಮಂದೆ ಗಾಡಿ ನಿಲ್ಲಿಸಬೇಡಿ ಎಂದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಹಲ್ಲೆಗೆ ಯತ್ನ..!
    ಇತ್ತೀಚಿನ ಸುದ್ದಿ

    ಮಂಗಳೂರು: ಬೇಕರಿ ಮಂದೆ ಗಾಡಿ ನಿಲ್ಲಿಸಬೇಡಿ ಎಂದಿದ್ದಕ್ಕೆ ಬೇಕರಿ ಮಾಲೀಕನ ಮೇಲೆ ಹಲ್ಲೆಗೆ ಯತ್ನ..!

    May 24, 2025
    Share

    ಮಂಗಳೂರು: ಬೇಕರಿ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಟೆಂಪೋ ರಿಕ್ಷಾವನ್ನು ಬದಿಗೆ ಸರಿಸಲು ಹೇಳಿದ್ದಕ್ಕೆ ಸಿಟ್ಟಾದ ಆಟೋ ಚಾಲಕ ತನ್ನ ಸಹಚರ ರಿಕ್ಷಾ ಚಾಲಕನೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಮತ್ತು ಅವರ ತಾಯಿಗೆ ಹಲ್ಲೆಗೆ ಯತ್ನಿಸಿದ್ದು, ರಿಕ್ಷಾ ಚಾಲಕರ ಪುಂಡಾಟಿಕೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

    ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಗುರುವಾರ ಮಧ್ಯಾಹ್ನ ಘಟನೆ ನಡೆದಿದೆ. ಮಾರುತಿ ಸ್ವೀಟ್ಸ್ ಮಾಲಕ ಅಶ್ವಿನ್ ಕುಮಾರ್ ಅವರು ತಮ್ಮ ಬೇಕರಿ ಮುಂದುಗಡೆಯೇ ಅಡ್ಡಲಾಗಿ ನಿಲ್ಲಿಸಿದ್ದ ಟೆಂಪೋ ರಿಕ್ಷಾವನ್ನು ಸ್ವಲ್ಪ ಬದಿಗೆ ಸರಿಸುವಂತೆ ಚಾಲಕ ಬಶೀರ್ ನಲ್ಲಿ ಹೇಳಿದ್ದಾರೆ. ಇಷ್ಟಕ್ಕೇ ಕುಪಿತಗೊಂಡ ಚಾಲಕ ಬಶೀರ್ ತನ್ನ ಸಹಚರ ರಿಕ್ಷಾ ಚಾಲಕರೊಂದಿಗೆ ಬೇಕರಿಗೆ ನುಗ್ಗಿ ಮಾಲಕ ಅಶ್ವಿನ್ ಅವರಿಗೆ ಹಲ್ಲೆ ನಡೆಸಲು ಮುಂದಾಗಿದ್ದಾನೆ. ಬೇಕರಿಯೊಳಗಿದ್ದ ಅಶ್ವಿನ್ ಅವರ ತಾಯಿ ಮತ್ತು ಸಿಬ್ಬಂದಿ ಯುವತಿ ರಿಕ್ಷಾ ಚಾಲಕರನ್ನು ತಡೆದಿದ್ದು ಅವರನ್ನೂ ತಳ್ಳಿ ಹಲ್ಲೆಗೆ ಮುಂದಾಗಿದ್ದಾರೆ.

    ಈ ವೇಳೆ ಪಕ್ಕದ ಶಿವಸಾಗರ್ ಹೊಟೇಲಿನ ಮಾಲಕ ಅವರು ಮಧ್ಯ ಪ್ರವೇಶಿಸಿ ಬೇಕರಿ ಮಾಲೀಕನಿಗೆ ಹಲ್ಲೆಗೆ ಮುಂದಾಗಿದ್ದ ರಿಕ್ಷಾ ಚಾಲಕರನ್ನು ಅಂಗಡಿಯಿಂದ ಹೊರ ತಳ್ಳಿದ್ದಾರೆ. ಘಟನೆಯ ದೃಶ್ಯವು ಬೇಕರಿಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಬೇಕರಿ ಮಾಲಕ ಅಶ್ವಿನ್ ಅವರು ತನ್ನ ಮತ್ತು ತಾಯಿ ಮೇಲೆ ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ನೀಡಿರುವ ರಿಕ್ಷಾ ಚಾಲಕ ಬಶೀರ್ ಮತ್ತು ಇಷಾನ್ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಉಳ್ಳಾಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

    Post Views: 173

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.