Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪರಾಧದಲ್ಲಿ ಭಾಗಿಯಾಗಿ ಸಮಾಜ ಸೇವೆಯ ಮೂಲಕ ಸಭ್ಯರಂತೆ ವರ್ತಿಸಿದರೆ ಪ್ರಯೋಜನವಿಲ್ಲ: ಎನ್.ಶಶಿಕುಮಾರ್
    ಇತ್ತೀಚಿನ ಸುದ್ದಿ

    ಅಪರಾಧದಲ್ಲಿ ಭಾಗಿಯಾಗಿ ಸಮಾಜ ಸೇವೆಯ ಮೂಲಕ ಸಭ್ಯರಂತೆ ವರ್ತಿಸಿದರೆ ಪ್ರಯೋಜನವಿಲ್ಲ: ಎನ್.ಶಶಿಕುಮಾರ್

    September 19, 2022
    Share

    ಮಂಗಳೂರು: ನಗರದ ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದ ಕುರಿತು ಮಂಗಳೂರು ನಗರದ ಪೊಲೀಸ್  ಕಮಿಷನರ್ ಎನ್. ಶಶಿಕುಮಾರ್ ಹೇಳಿಕೆ ನೀಡಿದ್ದಾರೆ.

    ಈ‌ ಕೇಸಲ್ಲಿ ಬಂಧಿಸಲ್ಪಟ್ಟ ಬಜಾಲ್ ನಿವಾಸಿ ತಲ್ಲತ್ ಯಾನೆ ತಲ್ಹತ್, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ದಾನ, ಧರ್ಮ, ರಕ್ತದಾನ ಮೂಲಕ ಸಮಾಜ ಸೇವೆ ಸಭ್ಯತೆರಂತೆ ವರ್ತಿಸಿದರೆ ಪ್ರಯೋಜನವಿಲ್ಲ ಎಂದರು.

    ಬಜಾಲ್ ನಿವಾಸಿ ತಲ್ಹತ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ನಗರ ಪೊಲೀಸ್ ಕಮಿನಷರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಅಧಿಕ ಪ್ರಕರಣಗಳಿವೆ. ಆರೋಪಿ ವಿರುದ್ಧ ಕಂಕನಾಡಿ, ಉಳ್ಳಾಲ, ಕೋಣಾಜೆ, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ  ಕೇಸು ದಾಖಲಾಗಿದೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲೂ ಕೊಲೆ ಪ್ರಕರಣ ದಾಖಲಾಗಿದೆ ಎಂದರು.

    ಆರೋಪಿ ತಲ್ಹತ್ ನಗರದ ಅಡ್ಯಾರ್, ಕಣ್ಣೂರು, ಬಜಾಲ್, ಬಂದರ್, ಉಳ್ಳಾಲ, ದೇರಳಕಟ್ಟೆ, ಫರಂಗಿಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಅಧಿಕ ಮಂದಿಯ ಯುವಕರ ಗ್ಯಾಂಗ್ ಕಟ್ಟಿಕೊಂಡು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈತನ ಸಹಚರರ ಮೇಲೂ ನಿಗಾ ಇರಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

    ಉಳ್ಳಾಲ ಹಲ್ಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ನೌಫಲ್ ವಿರುದ್ಧ 15, ಸಿದ್ದೀಕ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ತಲ್ಹತ್ ಗೆ ಮುಂಬೈ, ಕೇರಳದ ಮಂಜೇಶ್ವರದ ಕ್ರಿಮಿನಲ್ ‌ಗಳ ಜತೆಯೂ ಸಂಪರ್ಕವಿರುವ ಮಾಹಿತಿ ಲಭಿಸಿದ್ದು, ಆ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ ಎಂದರು.

    Post Views: 180

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.