ಮಂಗಳೂರು: ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಅರೆಸ್ಟ್ ಮಾಡಿ ಆತನಿಂದ ಒಟ್ಟು 21,000/- ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ 425 ಗ್ರಾಂ ತೂಕದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತನನ್ನು ಮೂಲತಃ ಉತ್ತರ ಪ್ರದೇಶ ರಾಜ್ಯದ ಹರೋಯಿ ಜಿಲ್ಲೆಯ ಜೂರಿ ಚಂದ್ರಾಪುರ್ ವಾಸಿಯಾದ ಪಾಲ್ ಎಂದು ಗುರುತಿಸಲಾಗಿದೆ. ಆರೋಪಿ ಗಾಂಜಾವನ್ನು ಉತ್ತರ ಪ್ರದೇಶದಿಂದ ಬಂದು ಹಣಕ್ಕಾಗಿ ಬೇರೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದ, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಅರೆಸ್ಟ್ ಮಾಡಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅ.ಕ್ರ 278/2025 ಕಲಂ 8(c), 20(b) ಎನ್.ಡಿ.ಪಿ.ಎಸ್ ಕಾಯ್ದೆ 1985 ರೀತ್ಯಾ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿರುತ್ತದೆ.




