Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಸಿಸಿಬಿ ಕಾರ್ಯಾಚರಣೆ – 13 ಕೆಜಿ ಗಾಂಜಾದೊಂದಿಗೆ ಇಬ್ಬರು ಅರೆಸ್ಟ್
    ಇತ್ತೀಚಿನ ಸುದ್ದಿ

    ಮಂಗಳೂರು: ಸಿಸಿಬಿ ಕಾರ್ಯಾಚರಣೆ – 13 ಕೆಜಿ ಗಾಂಜಾದೊಂದಿಗೆ ಇಬ್ಬರು ಅರೆಸ್ಟ್

    March 13, 2023
    Share

    ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ದಸ್ತಗಿರಿ ಮಾಡಿ 13 ಕೆಜಿ ಗಾಂಜಾವನ್ನು ಮಂಗಳೂರು ಸಿಸಿಬಿ ಪೊಲೀಸರು ಸ್ವಾಧೀನಪಡಿಸಿದ್ದಾರೆ. ಬಂಟ್ವಾಳ ಪಾಣೆಮಂಗಳೂರು ಅಲಡ್ಕ ನಿವಾಸಿ ಅಬ್ದುಲ್ ಸಾದಿಕ್ (35), ಬೆಳ್ತಂಗಡಿ ತಾಲೂಕು ಕಕ್ಕಿಂಜೆ ಗ್ರಾಮದ ನಿವಾಸಿ ನವಾಜ್(24) ಬಂಧಿತ ಆರೋಪಿಗಳು. ಮಾರ್ಚ್ 11ರಂದು ಸಂಜೆ ನಗರದ ಕಂಕನಾಡಿ ರೈಲ್ವೆ ಸ್ಟೇಷನ್ ನ ಅಳಪೆ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆಯವರ ನೇತೃತ್ವದ ಸಿಸಿಬಿ ಪೊಲೀಸರು ಗಾಂಜಾವನ್ನು ಹೊಂದಿದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರು ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ಗಾಂಜಾವನ್ನು ಸಾಗಾಟ ಮಾಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ‌ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಪೊಲೀಸರು ಅವರಿಂದ 3.90 ಲಕ್ಷ ರೂ. ಮೌಲ್ಯದ 13 ಕೆ ಜಿ ಗಾಂಜಾ, 2 ಮೊಬೈಲ್ ಫೋನ್ ಗಳು, 5,610 ರೂ. ನಗದು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ 4,15,610 ರೂ. ಆಗಬಹುದು. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Post Views: 165

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.