Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹಿಮಾಚಲದಿಂದ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ : ಮೂವರು ಆರೋಪಿಗಳ ಬಂಧನ..!!
    ಇತ್ತೀಚಿನ ಸುದ್ದಿ

    ಹಿಮಾಚಲದಿಂದ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ : ಮೂವರು ಆರೋಪಿಗಳ ಬಂಧನ..!!

    January 14, 2023
    Share

    ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್‌ಗಳನ್ನು  ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತರು ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ ಸುಕೇತ್ ಕಾವ, ಕಾರ್ಕಳ ಆನೆಕೆರೆ ನಿವಾಸಿ ಸುನಿಲ್  ಮತ್ತು ತಮಿಳುನಾಡು ರಾಜ್ಯದ ಕೊಯಂಬತ್ತೂರು ನಿವಾಸಿ ಅರವಿಂದ ಎಂದು ತಿಳಿದುಬಂದಿದೆ.

    ಹಿಮಾಚಲ ಪ್ರದೇಶ ರಾಜ್ಯದ ಕುಲ್ಲು ಜಿಲ್ಲೆಯ ಪಾರ್ವತಿ ವ್ಯಾಲಿ ಎಂಬ ಗುಡ್ಡಗಾಡು ಪ್ರದೇಶದ ಜನರಿಂದ ಕಡಿಮೆ ಹಣಕ್ಕೆ ಗಾಂಜಾ-ಚರಸ್‌ಗಳನ್ನು ಖರೀದಿ ಮಾಡುತ್ತಿದ್ದರು. ತಾವು ಟ್ರಕ್ಕಿಂಗ್ ಮಾಡುವವರು, ಪ್ರವಾಸಿಗರು, ಪ್ರವಾಸಿ ಗೈಡ್‌ಗಳು ಎಂದೆಲ್ಲಾ ಆ ಜನರನ್ನು ನಂಬಿಸುತ್ತಿದ್ದರು.

    ಅಲ್ಲಿನ ಜನರಿಂದ ಕಡಿಮೆ ಬೆಲೆಗೆ ಖರೀದಿಸಿಕೊಂಡು ರೈಲಿನಲ್ಲಿ ಬಂದು ಮಂಗಳೂರಿನ ಉದ್ಯಮಿಗಳು ಮತ್ತು ವ್ಯಾಪಾರಸ್ಥರಿಗೆ ಪೂರೈಸಿ ಅವರ ಮೂಲಕ ಸಾರ್ವಜನಿಕರಿಗೆ ಮತ್ತು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ತಲುಪುವಂತೆ ಮಾಡಿ ಸುಲಭವಾಗಿ ಹಣ ಸಂಪಾದನೆ ಮಾಡುತ್ತಿದ್ದರು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‍ ತಿಳಿಸಿದ್ದಾರೆ.

    ಆರೋಪಿಗಳ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡು ಕಾರ್ಯಾಚರಣೆಗಿಳಿದ ಸೆನ್ ಕ್ರೈಂ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ 500 ಗ್ರಾಂ ತೂಕದ ಚರಸ್ ಮತ್ತು 1 ಕೆ.ಜಿ ತೂಕದ ಗಾಂಜಾ, ಇವುಗಳನ್ನು ಸಾಗಾಟಕ್ಕೆ ಬಳಸಿದ ರಿಡ್ಜ್ ಕಾರು ಹಾಗೂ ಮೊಬೈಲ್ ಫೋನ್‌‌ಗಳು ಸೇರಿ ಒಟ್ಟು 8 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    Post Views: 183

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.