ಮಣಿಪಾಲ: ಮಣಿಪಾಲದ ವಿದ್ಯಾರತ್ನನಗರದ ಜಿಲ್ಲಾಧಿಕಾರಿ ಕಚೇರಿ ರಸ್ತೆಯ ಬಳಿ ಸ್ಕೂಟಿಯಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಮಹಮ್ಮದ್ ಅರ್ಫಾನ್ (26) ಎಂದು ಗುರುತಿಸಲಾಗಿದೆ.
ಆರೋಪಿಯು ಸ್ಕೂಟಿಯ ಡ್ಯಾಶ್ ಬೋರ್ಡ ನಲ್ಲಿದ್ದ ಬಿಳಿ ಬಣ್ಣದ MDMA 6.61 ಗ್ರಾಂ ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅದರ ಅಂದಾಜು ಮೌಲ್ಯ 13000 ರೂ. ಆಗಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.




