Facebook Twitter Instagram
    Thursday, August 20
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: MDMA, ಗಾಂಜಾ ಮಾರಾಟ ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: MDMA, ಗಾಂಜಾ ಮಾರಾಟ ಆರೋಪಿಗಳ ಬಂಧನ

    August 20, 2026
    Share

    ಮಂಗಳೂರು: ನಗರದಲ್ಲಿ ಮಾದಕ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲಗಳ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಮಂಗಳೂರು ನಗರ ಪೊಲೀಸರು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ ಲಕ್ಷಾಂತರ ರೂಪಾಯಿ ಮೌಲ್ಯದ MDMA ಹಾಗೂ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

    ಪ್ರಕರಣ 1: ಪಂಪ್‌ವೆಲ್‌ನಲ್ಲಿ ಆಟೋದಲ್ಲಿ MDMA ಮಾರಾಟ – ಕೇರಳದ ವ್ಯಕ್ತಿ ಬಂಧನ

    ಆಗಸ್ಟ್ 18 ರಂದು ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಪಂಪ್‌ವೆಲ್‌ನಿಂದ ನಂತೂರು ಕಡೆಗೆ ತೆರಳುವ ಸರ್ವಿಸ್ ರಸ್ತೆಯಲ್ಲಿ ಆಟೋ ರಿಕ್ಷಾದಲ್ಲಿ ವ್ಯಕ್ತಿಯೊಬ್ಬ MDMA ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಸ್ಥಳಕ್ಕೆ ದಾಳಿ ನಡೆಸಿದ ಪೊಲೀಸರು ಕೇರಳ ರಾಜ್ಯದ ಮಂಜೇಶ್ವರದ ವರ್ಕಾಡಿ ನಿವಾಸಿ ಮೊಹಮ್ಮದ್ ಇರ್ಷಾದ್ (30) ಎಂಬಾತನನ್ನು ಬಂಧಿಸಿದ್ದಾರೆ.

    ಆರೋಪಿಯಿಂದ ₹1,36,000 ಮೌಲ್ಯದ 13.69 ಗ್ರಾಂ MDMA, ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಆಟೋ ರಿಕ್ಷಾ ಸೇರಿದಂತೆ ಒಟ್ಟು ₹2,94,500 ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

    ಪ್ರಕರಣ 2: ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು – ಆಯುರ್ವೇದ ಥೆರಪಿಸ್ಟ್ ಅರೆಸ್ಟ್

    ಇನ್ನೊಂದು ಪ್ರಕರಣದಲ್ಲಿ, ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಸುತ್ತಿದ್ದ ಕೇರಳದ ಕಣ್ಣೂರು ಮೂಲದ ಹಾಗೂ ಕೊಂಚಾಡಿ ನಿವಾಸಿ, ಆಯುರ್ವೇದ ಕ್ಲಿನಿಕ್ ಥೆರಪಿಸ್ಟ್ ನಿತಿನ್ ಕೃಷ್ಣನ್ (27) ಎಂಬಾತನನ್ನು ಸುರತ್ಕಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 17 ರಂದು ಗಾಂಜಾ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದ ಆಶ್ವಿನ್ ಕ್ಸೇವಿಯರ್ ನೀಡಿದ ಸುಳಿವು ಆಧರಿಸಿ ಈ ಕಾರ್ಯಾಚರಣೆ ನಡೆಸಲಾಗಿದೆ.
    ಆರೋಪಿ ನಿತಿನ್‌ನಿಂದ ₹60,000 ಮೌಲ್ಯದ 1.206 ಕೆ.ಜಿ. ಗಾಂಜಾ, ಕೆಟಿಎಂ (KTM) ಬೈಕ್ ಹಾಗೂ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ.

    Post Views: 7

    Related Posts

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026

    ವಿಟ್ಲ: ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯ ವರ್ತನೆ- ಆರೋಪಿಯ ಬಂಧನ

    August 19, 2026

    ಮಂಗಳೂರು: ದ್ವಿಚಕ್ರ ವಾಹನ ಕಳವು ಆರೋಪ- ಆರೋಪಿಯ ಬಂಧನ

    August 19, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ – ಸಮಯಪ್ರಜ್ಞೆಯಿಂದ 7 ಪ್ರಯಾಣಿಕರು ಪಾರು

    August 20, 2026

    ಮಂಗಳೂರು: MDMA, ಗಾಂಜಾ ಮಾರಾಟ ಆರೋಪಿಗಳ ಬಂಧನ

    August 20, 2026

    ವಿಟ್ಲ: ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯ ವರ್ತನೆ- ಆರೋಪಿಯ ಬಂಧನ

    August 19, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.