Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು : ಆರೋಪಿಗಳಿಗೆ ಗಾಂಜಾ ಪೂರೈಸುತ್ತಿದ್ದ ಮೂವರ ಬಂಧನ

    February 8, 2026
    Share

    ಪುತ್ತೂರು : ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ಜ.19ರಂದು 53,03,000 ರೂ .ಮೌಲ್ಯದ 1 ಕ್ವಿಂಟಾಲ್ 6 ಕೆ.ಜಿ 50 ಗ್ರಾಂ ಗಾಂಜಾ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಒಡಿಶಾದ ವ್ಯಕ್ತಿ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಪ್ರಕರಣದ ಆರೋಪಿಗಳಿಗೆ ಹಣ ಮತ್ತು ವಾಹನದ ವ್ಯವಸ್ಥೆಯನ್ನು ಮಾಡಿದ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಮಹಮ್ಮದ್ ಫಯಾಜ್ ಡಿ.ಕೆ (27) ಹಾಗೂ ಬೆಳ್ತಂಗಡಿ ಕಕ್ಕಿಂಜೆ ನಿವಾಸಿ ನಝಿರ್ (42) ಒಡಿಶಾದ ದೀಪಕ್ ಪಾತ್ರ (37) ಎಂಬವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿಗಳಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಒಡಿಶಾದ ದೀಪಕ್ ಪಾತ್ರ ಎಂಬಾತನನ್ನು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ನೇತೃತ್ವದ ತನಿಖಾ ತಂಡ ಒಡಿಶಾ ರಾಜ್ಯಕ್ಕೆ ತೆರಳಿ ಬಂಧಿಸಿದೆ. ಈ ವೇಳೆ ಆತನಿಂದ ರೂ 80,000 ಮೌಲ್ಯದ, 1 ಕೆ.ಜಿ 788 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.

    ಈ ಕಾರ್ಯಾಚರಣೆಯಲ್ಲಿ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ರವರು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಹಾಗೂ ಸಿಬ್ಬಂದಿ ದೇವರಾಜ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಸುಬ್ರಮಣಿ, ಭೀಮಸೆನ್, ಸುರೇಶ ಹಾಗೂ ದಿವ್ಯಾಪ್ರಕಾಶ್ ಅವರನ್ನು ಒಳಗೊಂಡ ತಂಡ ಭಾಗಿಯಾಗಿದೆ.

    Post Views: 70

    Related Posts

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.