Facebook Twitter Instagram
    Friday, March 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಉಡುಪಿ: ಗರುಡ ಗ್ಯಾಂಗಿನ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ
    Uncategorized

    ಉಡುಪಿ: ಗರುಡ ಗ್ಯಾಂಗಿನ ಇಸಾಕ್ 9 ದಿನ ಪೊಲೀಸ್ ಕಸ್ಟಡಿಗೆ

    March 25, 2025
    Share

    ಉಡುಪಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಗುಂಡೇಟಿಗೆ ಒಳಗಾಗಿದ್ದ ಗರುಡ ಗ್ಯಾಂಗಿನ ಸದಸ್ಯ ಇಸಾಕ್‌ನನ್ನು ಮಣಿಪಾಲ ಪೊಲೀಸರು ಸೋಮವಾರ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನನ್ನು ನ್ಯಾಯಾಲಯ 9 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

    ಬೆಂಗಳೂರಿನ ನೆಲಮಂಗಲದ ಪೊಲೀಸರಿಂದ ಮಣಿಪಾಲದಲ್ಲಿ ತಪ್ಪಿಸಿ ಕೊಳ್ಳುವ ವೇಳೆ ಸಾರ್ವಜನಿಕರ ಕಾರು, ಬೈಕಿಗೆ ಗುದ್ದಿ ಪರಾರಿಯಾಗಿದ್ದ ಇಸಾಕ್‌ನನ್ನು ಮಣಿಪಾಲ ಪೊಲೀಸರು ಮಾ.12ರಂದು ಹಾಸನದಲ್ಲಿ ಬಂಧಿಸಿದ್ದರು. ಅಲ್ಲಿಂದ ಆತನನ್ನು ಕರೆ ತರುವಾಗ ದಾರಿ ಮಧ್ಯೆ ಹಿರಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರಿಗೆ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದನು.

    ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದರು. ಬಳಿಕ ಆತನನ್ನು ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಆತನನ್ನು ಶಸ್ತ್ರಚಿಕಿತ್ಸೆಗಾಗಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ವರ್ಗಾಯಿಸಲಾಗಿತ್ತು.

    ಇದೀಗ ಚೇತರಿಕೆ ಕಂಡಿರುವ ಇಸಾಕ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದರು. ಅದರಂತೆ ನ್ಯಾಯಾಲಯವು ಆರೋಪಿಯನ್ನು ಎ.1ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.

    ಇಸಾಕ್‌ನನ್ನು ಕಸ್ಟಡಿಗೆ ಪಡೆದುಕೊಂಡಿರುವ ಮಣಿಪಾಲ ಪೊಲೀಸರು, ಅಪಹರಣ, ಮಾದಕ ದ್ರವ್ಯ ಸೇರಿದಂತೆ ವಿವಿಧ ಪ್ರಕರಣಗಳಿಗೆ ಸಂಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದುಬಂದಿದೆ.

    Post Views: 284

    Related Posts

    ಮಂಗಳೂರು: ಹೈದರಾಬಾದ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೈಬರ್ ವಂಚಕರ ಜಾಲವನ್ನು ಬೇಧಿಸಿದ ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು- 6 ಮಂದಿ ಆರೋಪಿಗಳ ಬಂಧನ

    February 28, 2026

    ಪ್ರತಿಷ್ಠಿತ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ; 99 ಪರ್ಸೆಂಟೈಲ್ ಕ್ಕಿಂತ ಅಧಿಕ ಅಂಕ ಪಡೆದ 15 ವಿದ್ಯಾರ್ಥಿಗಳು

    February 18, 2026

    ಮಂಗಳೂರು:ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಯುವತಿ ಸಾವು , ಶವ ಮುಂದಿಟ್ಟು ಪ್ರತಿಭಟಿಸಿದವರ ವಿರುದ್ಧವೂ ಕೇಸ್- ಕಮಿಷನರ್

    February 6, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.