Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಹಾಡಹಗಲೇ ವೃದ್ಧೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿ
    ಇತ್ತೀಚಿನ ಸುದ್ದಿ

    ಮಂಗಳೂರು: ಹಾಡಹಗಲೇ ವೃದ್ಧೆಯ ಕತ್ತಿನಿಂದ ಚಿನ್ನದ ಸರ ಕಸಿದು ಪರಾರಿ

    September 29, 2025
    Share

    ಮಂಗಳೂರು: ಬೈಕ್‌ನಲ್ಲಿ ಬಂದ ಯುವಕನೊಬ್ಬ 74 ವರ್ಷದ ವೃದ್ಧೆಯ ಕತ್ತಿನಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ಕಸಿದು ಪರಾರಿಯಾಗಿದ್ದು, ಘಟನೆಯಲ್ಲಿ ವೃದ್ಧೆ ಗಾಯಗೊಂಡಿರುವ ಘಟನೆ ಮುಲ್ಕಿ ಪೋಸ್ಟ್ ಆಫೀಸ್ ಬಳಿಯ ಅಕ್ಕಸಾಲಿಗರ ಕೇರಿ ವೀರ ಮಾರುತಿ ದೇವಸ್ಥಾನದ ಸಮೀಪದ ಒಳ ರಸ್ತೆಯಲ್ಲಿ ನಡೆದಿದೆ.

    ಗಾಯಗೊಂಡ ವೃದ್ಧೆಯನ್ನು ಪೋಸ್ಟ್ ಆಫೀಸ್ ಬಳಿಯ ನಿವಾಸಿ ನಳಿನಿ ಎ ನಾಯಕ್ ಎಂದು ಗುರುತಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    ಮಧ್ಯಾಹ್ನದ ಊಟದ ಬಳಿಕ ನಳಿನಿಯವರು ಎಂದಿನಂತೆ ವಾಕಿಂಗ್‌ಗೆ ಹೋಗಲು ಸಿದ್ಧರಾಗಿ ಗೇಟ್ ಬಳಿ ಬಂದಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ಯುವಕನೊಬ್ಬ ಮುಲ್ಕಿ ಕಡೆಯಿಂದ ಬಂದು, ನಾಗೇಶ್ ರಾವ್ ಅವರ ಮನೆ ಎಲ್ಲಿದೆ ಎಂದು ವಿಚಾರಿಸಿದ್ದಾನೆ. ತನಗೆ ಗೊತ್ತಿಲ್ಲ ಎಂದು ಉತ್ತರಿಸಿದ ನಳಿನಿಯವರು, ವೀರ ಮಾರುತಿ ದೇವಸ್ಥಾನಕ್ಕೆ ಹೋಗುವ ಒಳ ರಸ್ತೆಯಲ್ಲಿ ನಡೆದು ಹೋಗುತ್ತಿದ್ದರು.

    ಆ ಯುವಕ ಬೈಕ್‌ನಲ್ಲಿ ಅವರನ್ನು ಹಿಂಬಾಲಿಸಿ, ರಸ್ತೆಯ ಮೇಲಿದ್ದ ನೀರಿನ ಟ್ಯಾಂಕ್ ಬಳಿ ತಡೆದು, ಚಾಕು ತೋರಿಸಿ ಸರಕ್ಕಾಗಿ ಬೇಡಿಕೆ ಇಟ್ಟಿದ್ದಾನೆ. ಆತ್ಮರಕ್ಷಣೆಗಾಗಿ ನಳಿನಿಯವರು ತಮ್ಮ ಕೊಡೆಯಿಂದ ಆತನ ಕೈಗೆ ಹೊಡೆದಾಗ, ಆತ ಅವರನ್ನು ತಳ್ಳಿ, ಚಿನ್ನದ ಸರವನ್ನು ಕಸಿದು ವೇಗವಾಗಿ ಪರಾರಿಯಾಗಿದ್ದಾನೆ.

    ತಕ್ಷಣವೇ ಮನೆಗೆ ಮರಳಿದ ನಳಿನಿಯವರು ಪೊಲೀಸರಿಗೆ ವಿಷಯ ತಿಳಿಸಿದರು. ನಂತರ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಆ ಯುವಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಡುಪಿ ಕಡೆಗೆ ಪರಾರಿಯಾಗಿರುವುದು ತಿಳಿದುಬಂದಿದೆ.

    ಮುಲ್ಕಿ ಪಟ್ಟಣ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಮತ್ತು ಸದಸ್ಯ ಸುಭಾಷ್ ಶೆಟ್ಟಿ ಅವರು ಸ್ಥಳಕ್ಕೆ ಭೇಟಿ ನೀಡಿದರು. ಮುಲ್ಕಿ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

    Post Views: 116

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.