Facebook Twitter Instagram
    Tuesday, September 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಚಿನ್ನ ಪಾಲೀಶ್ ಮಾಡುವ ನೆಪದಲ್ಲಿ ವಂಚನೆ- ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಚಿನ್ನ ಪಾಲೀಶ್ ಮಾಡುವ ನೆಪದಲ್ಲಿ ವಂಚನೆ- ಆರೋಪಿಯ ಬಂಧನ

    March 2, 2026
    Share

    ಬೆಳ್ತಂಗಡಿ: ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

    ವೇಣೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಪ್ರದೇಶದಲ್ಲಿ ಫೆಬ್ರವರಿ 10, 2026 ರಂದು ಘಟನೆ ನಡೆದಿದೆ. ಸೇಲ್ಸ್‌ಮ್ಯಾನ್‌ ರೂಪದಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಮನೆಮಂದಿಗೆ ಚಿನ್ನದ ಒಡವೆಗಳನ್ನು ತೊಳೆಯುವ ಹಾಗೂ ಪಾಲೀಶ್ ಮಾಡುವುದಾಗಿ ನಂಬಿಸಿ ಪಡೆದುಕೊಂಡು, ಯಾವುದೋ ರಾಸಾಯನಿಕ ದ್ರಾವಣ ಬಳಸಿ ಚಿನ್ನವನ್ನು ಕರಗಿಸಿ ವಂಚನೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ.

    ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.13/2026, ಕಲಂ 318(4) ಬಿ.ಎನ್‌.ಎಸ್‌. 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಆರೋಪಿತನಾದ ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30) ಎಂಬಾತನನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯಿಂದ ಸುಮಾರು ₹75,000 ಮೌಲ್ಯದ 7.00 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.ಆರೋಪಿತರ ಪತ್ತೆಗಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಅಕ್ಷಯ್ ಡವಗಿ ಹಾಗೂ ಶ್ರೀಮತಿ ಓಮನ ಎನ್ ಅವರ ನೇತೃತ್ವದಲ್ಲಿ ಎಎಸ್‌ಐ ವೆಂಕಟೇಶ್ ನಾಯ್ಕ, ಎಎಸ್‌ಐ ಬೆನ್ನಿಚ್ಚನ್, ಹೆಚ್‌ಸಿ 405 ಕೃಷ್ಣ, ಮಹೆಚ್‌ಸಿ 913 ಶ್ರೀಮತಿ ಕೇಶವತಿ, ಪಿಸಿ 2466 ಬಸವರಾಜ್, ಪಿಸಿ 434 ಮೋಹನ್ ಹಾಗೂ ಪಿಸಿ 604 ರಾಕೇಶ್ ಅವರ ತಂಡ ಕಾರ್ಯಾಚರಣೆ ನಡೆಸಿತು.

    Post Views: 155

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.