Facebook Twitter Instagram
    Saturday, July 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು ಏರ್ಪೋರ್ಟ್ ನಲ್ಲಿ ಚಿನ್ನ ಕಳ್ಳತನ ಪ್ರಕರಣ- 5 ಮಂದಿಯ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು ಏರ್ಪೋರ್ಟ್ ನಲ್ಲಿ ಚಿನ್ನ ಕಳ್ಳತನ ಪ್ರಕರಣ- 5 ಮಂದಿಯ ಬಂಧನ

    September 3, 2025
    Share

    ಬಜ್ಪೆ: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಟ್ರೋಲಿ ಬ್ಯಾಗ್ ತೆರೆದು 4.5ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದಿರುವ ಪ್ರಕರಣದಲ್ಲಿ 5 ಮಂದಿಯನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.

    ಬಂಧಿತರು ಏರ್ ಇಂಡಿಯಾ ಎಕ್ಸ್ ಪ್ರೆಸ್ ನ ಲೋಡಿಂಗ್ ಅನ್ ಲೋಡಿಂಗ್ ಮಾಡುವ ಸಾಟ್ಸ್ ನೌಕರರಾದ ನಿತಿನ್, ಮೂಡುಪೆರಾರದ ನಿವಾಸಿಗಳಾದ ಸದಾನಂದ, ರಾಜೇಶ್, ಬಜ್ಪೆ ನಿವಾಸಿ ಪ್ರವೀಣ್ ಫೆರ್ನಾಂಡಿಸ್ ಮತ್ತು ಚಿನ್ನಾಭರಣ ಪಡೆದುಕೊಂಡು ಚಿನ್ನದ ಗಟ್ಟಿಯಾಗಿಸಿದ್ದ ಬಜ್ಪೆ ಮೂಡು ಪೆರಾರ ನಿವಾಸಿ ರವಿರಾಜ್ ಎಂದು ತಿಳಿದು ಬಂದಿದೆ.

    ರಾಜೇಶ್ವರಿ ಪದ್ಮಶಾಲಿ ಅವರು ಆ.30ರಂದು ಬೆಂಗಳೂರಿನಿಂದ ಮಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ‌ ಸಂದರ್ಭ ಅವರ‌ ಲಗೇಜ್ ಟ್ರೋಲಿ ಬ್ಯಾಗನ್ನು ತೆರೆದು 4.5ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕಳವು ಮಾಡಲಾಗಿತ್ತು. ಈ ಕುರಿತು ಅವರು ಬಜ್ಪೆ ಪೊಲೀಸರಿಗೆ ದೂರು ನೀಡಿದ್ದರು‌.

    ಈ ಸಂಬಂಧ ದೂರು ದಾಖಲಿಸಿಕೊಂಡ ಬಜ್ಪೆ ಪೊಲೀಸರು ತನಿಖೆ ಆರಂಭಿಸಿ ವಿಮಾನ ನಿಲ್ದಾಣದ ಲೋಡ್ ಮತ್ತು ಅನ್ ಲೋಡ್ ಮಾಡುತ್ತಿದ್ದ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ಸಂದರ್ಭ ಚಿನ್ನಾಭರಣ ಕಳವುಗೈದು ಬಜ್ಪೆ ಮೂಡುಪೆರಾರ ನಿವಾಸಿ ರವಿರಾಜ್ ಎಂಬಾತನಿಗೆ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದರು ಎಂದು ತಿಳಿದು ಬಂದಿದೆ.

    ಬಳಿಕ ರವಿರಾಜ್ ನನ್ನು ಬಂಧಿಸಿದ ಬಜ್ಪೆ ಪೊಲೀಸರು ಆತನ ಬಳಿಯಿಂದ ಮಹಿಳೆಯ ಚಿನ್ನಾಭರಣವನ್ನು ಕರಗಿಸಿ ಮಾಡಿದ್ದ ಚಿನ್ನದ ಗಟ್ಟಿ ಸೇರಿ ಸುಮಾರು 5ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌.

    Post Views: 148

    Related Posts

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026

    ಕಾಸರಗೋಡಿನಲ್ಲಿ ಆರ್‌ವಿಆರ್ ನ್ಯೂರೋ-ಆಂಕಾಲಜಿ ಕೇಂದ್ರ ಆರಂಭ.ದೇಶಾದ್ಯಂತ ‘ಆರೋಗ್ಯ ಬೈ ಆರ್‌ವಿಆರ್’ ವಿಸ್ತರಣೆ.ಕೈಗೆಟುಕುವ ದರದಲ್ಲಿ ವಿಶ್ವದರ್ಜೆಯ ಆರೋಗ್ಯ ಸೇವೆಗೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟ ಆರ್‌ವಿಆರ್ ಹೆಲ್ತ್‌ಕೇರ್

    July 24, 2026

    ನೀಟ್ ಪ್ರತಿಭಟನೆ ಕುರಿತು ವಿವಾದಾತ್ಮಕ ಪೋಸ್ಟ್; ವಿಟ್ಲದಲ್ಲಿ ವ್ಯಕ್ತಿಯ ಅರೆಸ್ಟ್

    July 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.