ಬೆಳ್ತಂಗಡಿ: ವೇಣೂರಿನ ತಿಮ್ಮಣ್ಣ ಅಜಿಲರು 1604ರಲ್ಲಿ ಪ್ರತಿಷ್ಠಾಪಿಸಿದ ಬಾಹುಬಲಿ ಮೂರ್ತಿಗೆ ಈ ಶತಮಾನದ ಮೂರನೇ ಮಹಾಮಸ್ತಕಾಭಿಷೇಕವು ಗುರುವಾರ ವಿದ್ಯುಕ್ತವಾಗಿ ಆರಂಭಗೊಂಡಿತು.
ಗುರುವಾರ ಸಂಜೆ 7 ಗಂಟೆಗೆ 108 ಕಲಶಗಳ ಅಭಿಷೇಕ ಆರಂಭಗೊಂಡಿತು. ಬೆಳ್ತಂಗಡಿ ತಾಲೂಕಿನ ವೇಣೂರಿನ ಬಾಹುಬಲಿ ಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ಅಧಿಕೃತ ಚಾಲನೆ ಸಿಕ್ಕಿದ್ದು, 12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ.
12 ವರ್ಷದ ಬಳಿಕ ಕಲಶದ ಮೂಲಕ 35 ಅಡಿ ಎತ್ತರದ ಬಾಹುಬಲಿ ಮೂರ್ತಿಗೆ ಐದು ಅಂತಸ್ತಿನ ಅಟ್ಟಳಿಗೆ ಹತ್ತಿ ಅಭಿಷೇಕ ಮಾಡುತ್ತಿದ್ದಾರೆ. ಇದನ್ನು ಕಣ್ತುಂಬಿಕೊಳ್ಳಲು ವೇಣೂರು ಬಾಹುಬಲಿ ಮಹಾಮಸ್ತಕಾಭಿಷೇಕದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದಾರೆ. ಇನ್ನು ಮಾರ್ಚ್ 1ರವರೆಗೂ ವಿವಿಧ ದ್ರವ್ಯಗಳಿಂದ ಬಾಹುಬಲಿ ಮೂರ್ತಿಗೆ ಅಭಿಷೇಕ ನಡೆಯಲಿದೆ.