Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ ಬೀಚಲ್ಲಿ ನೀರಾಟಕ್ಕಿಳಿದ ಯುವಕರು ನೀರುಪಾಲು: ಓರ್ವ ಸಾವು,ಮತ್ತೋರ್ವ ನೀರುಪಾಲು
    ಇತ್ತೀಚಿನ ಸುದ್ದಿ

    ಉಳ್ಳಾಲ ಬೀಚಲ್ಲಿ ನೀರಾಟಕ್ಕಿಳಿದ ಯುವಕರು ನೀರುಪಾಲು: ಓರ್ವ ಸಾವು,ಮತ್ತೋರ್ವ ನೀರುಪಾಲು

    December 29, 2023
    Share

    ಉಳ್ಳಾಲ : ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದ್ದು,ಓರ್ವ ಯುವಕ ಮೃತ ಪಟ್ಟರೆ,ಮತ್ತೋರ್ವ ಸಮುದ್ರ ಪಾಲಾಗಿದ್ದು ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ. ಚಿಕ್ಕ ಮಂಗಳೂರು ನಿವಾಸಿ ಸಲ್ಮಾನ್(19) ಮೃತ ಪಟ್ಟ ಯುವಕನಾಗಿದ್ದು ,ಆತನ ಸಂಬಂಧಿ ಬಶೀರ್(23)ನೀರು ಪಾಲಾಗಿದ್ದು ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ. ಚಿಕ್ಕ ಮಂಗಳೂರು ಮೂಲದ ಬಶೀರ್,ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್,ಸೈಫ್ ಅಲಿ ನೀರಾಟಕ್ಕಿಳಿದಿದ್ದು ರಕ್ಕಸ ಅಲೆಗಳು ಮೂವರನ್ನ ಎಳೆದೊಯ್ದಿದೆ.ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು,ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು,ಅಗ್ನಿ ಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರು ಪಾಲಾಗಿರುವ ಬಶೀರನ‌ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರಂತೆ.

    Post Views: 190

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.