Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»PSI ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ನೇಮಕಾತಿಗೆ ಆದೇಶ
    ಇತ್ತೀಚಿನ ಸುದ್ದಿ

    PSI ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಶೀಘ್ರವೇ ಹೊಸ ನೇಮಕಾತಿಗೆ ಆದೇಶ

    June 1, 2023
    Share

    ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕಾರಣದಿಂದ ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ರದ್ದುಗೊಳಿಸಿತ್ತು. ಈಗ ನೂತನ ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಕೈಗೊಂಡು, ಹೊಸ ನೇಮಕಾತಿಗೆ ಆದೇಶ ಹೊರಡಿಸುವಂತ ಸುಳಿವು ನೀಡಿದೆ.

    ಈ ಮೂಲಕ ಪಿಎಸ್‌ಐ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.

    ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ತನಿಖೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆ ಬಳಿಕ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು.

    ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ ಹೈಕೋರ್ಟ್ ನಲ್ಲಿದೆ. ನೇಮಕಾತಿಗೂ ಹೈಕೋರ್ಟ್ ತಡೆ ಇದೆ. ಈ ಸಂಬಂಧ ತಾರ್ಕಿಕ ಮತ್ತು ಕಾನೂನಾತ್ಮಕ ಅವಕಾಶಗಳ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

    ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತ ರೀತಿಯಲ್ಲಿ ಪಿಎಸ್‌ಐ ನೇಮಕಾತಿ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

    ಅಂದಹಾಗೇ ಹೈಕೋರ್ಟ್ ನಲ್ಲಿ ಪಿಎಸ್‌ಐ ಹಗರಣದ ತನಿಖೆಗೆ ತಡೆಯಾಜ್ಞೆಯಿದೆ. ಆ ತಡೆಯಾಜ್ಞೆ ತೆರವುಗೊಳಿಸಲು ಈಗ ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಈ ಸಂಬಂಧ ಎಜೆ ಶಶಿಕಿರಣ್ ಶೆಟ್ಟಿ ಜೊತೆಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಸೋಮವಾರ ಮತ್ತೊಮ್ಮೆ ಎಜೆ ಜೊತೆಗೆ ಚರ್ಚಿಸಲಿದ್ದಾರೆ.

    ತನಿಖೆಗೆ ತೊಡಕಿರುವ ಕಾನೂನು ವಿಚಾರಗಳ ಕುರಿತಂತೆ ಎಜೆ ಜೊತೆಗೆ ಚರ್ಚಿಸಲಿರುವಂತ ಅವರು, ಅವರ ಸಲಹೆ ಪಡೆದು ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ತೀರ್ಮಾನಿಸಿದ್ದಾರೆ. ಜೊತೆಗೆ ಮತ್ತೊಮ್ಮೆ ಪರೀಕ್ಷೆ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.

    Post Views: 228

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.