Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಪೊಲೀಸರಿಗೆ ಸಿಹಿ ಸುದ್ದಿ – ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್
    ಇತ್ತೀಚಿನ ಸುದ್ದಿ

    ರಾಜ್ಯದ ಪೊಲೀಸರಿಗೆ ಸಿಹಿ ಸುದ್ದಿ – ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್

    February 27, 2024
    Share

    ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಕಾನ್ಸ್ ಟೇಬಲ್ ಗಳ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಅಂತರ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಪೊಲೀಸ್‌ರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಪೊಲೀಸ್ ಪತಿ-ಪತ್ನಿ ಪ್ರಕರಣಗಳಲ್ಲಿ ಅಂತರ್ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ. ಲೋಕಸಭಾ ಚುನಾವಣೆಗೆ ನೀತಿ ಸಂಹಿತೆ ಜಾರಿಯಾಗುವ ಮುನ್ನ ಅರ್ಹ ಪೊಲೀಸ್ ಕಾನ್ಸ್ ಟೇಬಲ್ ಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಪ್ರಸ್ತಾವನೆಗಳ ಬಗ್ಗೆ ಕ್ರಮ ಕೈಗೊಂಡು, ಆ ಬಗ್ಗೆ ತಮಗೆ ವರದಿ ನೀಡುವಂತೆಯೂ ಗೃಹ ಸಚಿವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದಲ್ಲಿ ನಿರ್ದೇಶಿಸಿದ್ದಾರೆ. ಅಂದ ಹಾಗೇ ಕಳೆದ ಮೂರು ವರ್ಷಗಳಿಂದ ಪೊಲೀಸ್ ಪೇದೆಗಳ ವರ್ಗಾವಣೆ ನಡೆದಿಲ್ಲ. ಈ ಸಂಬಂಧ ಗೃಹ ಸಚಿವರಿಗೆ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನಮಗೆ ದಯಾಮರಣ ನೀಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಪೊಲೀಸ್‌ಯೊಬ್ಬರು ಬರೆದಂತ ಪತ್ರ ವೈರಲ್ ಆಗಿತ್ತು. ಈ ಬೆನ್ನಲ್ಲೇ ಗೃಹ ಸಚಿವ ಡಾ.ಜಿ ಪರಮೇಶ್ವರ್ ಈ ಸೂಚನೆ ನೀಡಿದ್ದಾರೆ.

    Post Views: 227

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.