Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಪೋಲಿಸ್‌ ನೇಮಕಾತಿಯಲ್ಲಿ ಶೇ.20 ರಷ್ಟು ಆದ್ಯತೆ, ಗೃಹಸಚಿವ ಅರಗ ಜ್ಞಾನೇಂದ್ರ ಘೋಷಣೆ
    ಇತ್ತೀಚಿನ ಸುದ್ದಿ

    ರಾಜ್ಯದ ಮಹಿಳೆಯರಿಗೆ ಸಿಹಿ ಸುದ್ದಿ: ಪೋಲಿಸ್‌ ನೇಮಕಾತಿಯಲ್ಲಿ ಶೇ.20 ರಷ್ಟು ಆದ್ಯತೆ, ಗೃಹಸಚಿವ ಅರಗ ಜ್ಞಾನೇಂದ್ರ ಘೋಷಣೆ

    September 5, 2022
    Share

    ಶೀಘ್ರದಲ್ಲಿಯೇ 900 ಪಿಎಸ್‌ಐಗಳ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಅಂತ ಗೃಹಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ಅವರು ಇಂದು ಕಸಬಾಪೇಟ ಹಾಗೂ ದಕ್ಷಿಣ ಸಂಚಾರ ಪೊಲೀಸ್ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ,ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

    ಇದೇ ವೇಳೆ ಅವರು ಮಾತನಾಡಿ, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು‌ ಅನುಕರಣೀಯ ಸಂಗತಿಯಾಗಿದೆ.ಈ ಹಿಂದೆ ವರ್ಷಕ್ಕೆ ರಾಜ್ಯದಲ್ಲಿ 2 ರಿಂದ 3 ಪೊಲೀಸ್ ಠಾಣೆಗಳನ್ನು ನಿರ್ಮಿಸಲಾಗುತ್ತಿತ್ತು.ಈಗ ವಾರ್ಷಿಕ‌ 100 ಕ್ಕೂ ಹೆಚ್ಚು ಠಾಣೆಗಳನ್ನು ನಿರ್ಮಿಸಲಾಗುತ್ತಿದೆ.ಶೇ.35 ರಷ್ಟಿದ್ದ ಖಾಲಿ ಹುದ್ದೆಗಳ ಪ್ರಮಾಣವನ್ನು ಶೇ.12 ಕ್ಕೆ ಇಳಿಕೆ ಮಾಡಲಾಗಿದೆ.ಶೀಘ್ರದಲ್ಲಿಯೇ 900 ಪಿಎಸ್‌ಐಗಳ ನೇಮಕಾತಿ ನಡೆಯಲಿದೆ.ನೇಮಕಾತಿಯಲ್ಲಿ ಶೇ.20 ರಷ್ಟು ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.ಪೊಲೀಸ್ ಇಲಾಖೆಗೆ ಈ ವರ್ಷ ಅತ್ಯಂತ ಸವಾಲಿನದಾಗಿತ್ತು.ಹುಬ್ಬಳ್ಳಿ ಗಲಭೆಯನ್ನು ಇಲ್ಲಿನ ಪೊಲೀಸ್ ಆಯುಕ್ತ ಲಾಭೂರಾಮ್ ನೇತೃತ್ವದ ತಂಡ ಅತ್ಯಂತ ಸಮರ್ಥವಾಗಿ ಹಾಗೂ ಕ್ಷಿಪ್ರವಾಗಿ ತಹಬಂದಿಗೆ ತರುವ ಮೂಲಕ ಇಲ್ಲಿನ ಪೊಲೀಸರು ಉತ್ತಮ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು‌.

    ಇದೇ ವೇಳೆ ಗಣಿ,ಭೂವಿಜ್ಞಾನ ,ಮಹಿಳಾ,ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ,ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ,ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ,ಪ್ರದೀಪ ಶೆಟ್ಟರ್,ಎಸ್.ವಿ.ಸಂಕನೂರ,ಶಾಸಕರಾದ ಅಮೃತ ದೇಸಾಯಿ,ಸಿ.ಎಂ.ನಿಂಬಣ್ಣವರ,ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ,ಅರಣ್ಯ ವಸತಿ ಹಾಗೂ ವಿಹಾರಧಾಮಗಳ ಸಂಸ್ಥೆ ಅಧ್ಯಕ್ಷ ರಾಜೇಶ ಕೋಟೆಣ್ಣವರ,ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮೇಯರ್ ಈರೇಶ ಅಂಚಟಗೇರಿ,ಉಪಮೇಯರ್ ಉಮಾ ಮುಕುಂದ್,ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್,ಎಡಿಜಿಪಿ ಅರುಣ ಚಕ್ರವರ್ತಿ, ಉತ್ತರ ವಲಯ ಪೊಲೀಸ್ ಮಹಾ ನಿರೀಕ್ಷಕ,ಎನ್.ಸತೀಶಕುಮಾರ,ಜಿಲ್ಲಾಧಿಕಾರಿ ಗುರುದತ್ತ ಹೆಗಡೆ,ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಭೂರಾಮ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಬಿ.ಜಗಲಾಸರ್,ವಾಕರಸಾಸಂ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್,ಮಹಾನಗರಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ,ಜಿಪಂ‌ ಸಿಇಓ ಡಾ.ಸುರೇಶ ಇಟ್ನಾಳ,ಕೆಎಸ್‌ಪಿಹೆಚ್ ಕಾರ್ಯನಿರ್ವಾಹಕ ಅಭಿಯಂತರ ಬಸವರಾಜ ಬಿ.ಎಸ್.ಮತ್ತಿತರರು ವೇದಿಕೆಯಲ್ಲಿದ್ದರು.

    Post Views: 215

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.