Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್ಮುಂದೆ ಲಾಂಗು, ಮಚ್ಚು ಪ್ರದರ್ಶಿಸಿದರೆ ‘ಗೂಂಡಾ ಕಾಯ್ದೆ’ ದಾಖಲು : ಗೃಹ ಸಚಿವ ಡಾ. ಜಿ.ಪರಮೇಶ್ವರ್
    ಇತ್ತೀಚಿನ ಸುದ್ದಿ

    ಇನ್ಮುಂದೆ ಲಾಂಗು, ಮಚ್ಚು ಪ್ರದರ್ಶಿಸಿದರೆ ‘ಗೂಂಡಾ ಕಾಯ್ದೆ’ ದಾಖಲು : ಗೃಹ ಸಚಿವ ಡಾ. ಜಿ.ಪರಮೇಶ್ವರ್

    March 7, 2025
    Share

    ಬೆಂಗಳೂರು : ಇನ್ಮುಂದೆ ಮಚ್ಚು, ಲಾಂಗ್ ತೋರಿಸುವವರು, ಕಾನಾನು ಸುವ್ಯವಸ್ಥೆ ಹಾಳು ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು.

    ಜೆಡಿಎಸ್ ನಾಯಕ ಎಸ್.ಎಲ್.ಭೋಜೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ಕಳೆದ 2-3 ವರ್ಷಗಳ ಅವಧಿಯಲ್ಲಿ ನಡೆದಿರುವ ವಿವಿಧ ಅಪರಾಧ ಪ್ರಕರಣಗಳು, ಕೈಗೊಂಡ ಕ್ರಮ, ಅಪರಾಧಿಗಳ ಬಂಧನ ಕುರಿತು ಅಂಕಿ ಅಂಶಗಳ ಸಹಿತ ವಿವರಿಸಿ, ಕಾನೂನು ಮತ್ತು ಸುವ್ಯವಸ್ಥೆ ಹದಗೆಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

    ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ. ಸಮಾಜದ ಶಾಂತಿ ಹಾಳು ಮಾಡುವ ಉದ್ದೇಶದಿಂದ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಗಲಭೆ ಸೃಷ್ಟಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಗೂಂಡಾ ಕಾಯ್ದೆಯಡಿ ಮೂರು ವರ್ಷಗಳಲ್ಲಿ 139 ಗೂಂಡಾಗಳನ್ನು ಬಂಧಿಸಿ ಜೈಲಿಗಟ್ಟಲಾಗಿದೆ. ಪೊಲೀಸ್ ಠಾಣೆಗಳಲ್ಲಿ ಬೀಟ್ ವ್ಯವಸ್ಥೆ ಹೆಚ್ಚಿಸಲಾಗಿದೆ. ಹೊಯ್ಸಳ ಗಸ್ತು ಕರ್ತವ್ಯ ಬಲಪಡಿಸಲಾಗಿದೆ. ನಗರದ ಯಾವುದೇ ಸ್ಥಳದಿಂದ 112ಗೆ ಕರೆ ಮಾಡಿದರೆ ಸರಾಸರಿ 9 ನಿಮಿಷಗಳಲ್ಲಿ ಸ್ಥಳಕ್ಕೆ ಹೊಯ್ಸಳ ಬರುವ ವ್ಯವಸ್ಥೆ ಮಾಡಲಾಗಿದೆ.

    ವ್ಹೀಲಿಂಗ್ ಮಾಡುವುದಲ್ಲದೆ ಚಾಕು, ಚೂರಿ ಹಾಗೂ ಲಾಂಗ್ ಹಿಡಿದುಕೊಂಡು ಓಡಾಡಿ ಸಮಾಜದ ಸ್ವಾಸ್ಥ್ಯ ಕದಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ, 1,342 ಪ್ರಕರಣಗಳು ದಾಖಲಾಗಿದ್ದು, 1,046 ವ್ಯಕ್ತಿಗಳನ್ನು ಬಂಧಿಸಲಾಗಿದೆ.ರಾಜ್ಯದೆಲ್ಲೆಡೆ ದಾಖಲಾದ ಒಟ್ಟು ವ್ಹೀಲಿಂಗ್ ಪ್ರಕರಣಗಳಲ್ಲಿ ಬೆಂಗಳೂರು ನಗರದಲ್ಲಿ 893 ಪ್ರಕರಣ ದಾಖಲಾಗಿದ್ದು, 788 ಮಂದಿಯನ್ನು ಬಂಧಿಸಲಾಗಿದೆ. ರಾಜ್ಯದ ಇತರೆಡೆ 449 ಪ್ರಕರಣ ದಾಖಲಾಗಿದ್ದು, 258 ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದೇವೆಂದು ಹೇಳಿದರು.

    Post Views: 334

    Related Posts

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ- ಎರಡನೇ ಆರೋಪಿಗೆ ಷರತ್ತುಬದ್ಧ ಜಾಮೀನು

    July 26, 2026

    ಬಂಟ್ವಾಳ: ಶಾಲಾ ಬಸ್ ದುರಂತ ಪ್ರಕರಣ-ಶ್ರೀರಾಮ ವಿದ್ಯಾಕೇಂದ್ರ ವಿರುದ್ಧ FIR

    July 26, 2026

    ಸಂತ ಜೋಸೆಫರ ವಿಶ್ವವಿದ್ಯಾಲಯ: ‘ಓಪನ್ ಡೇ 2026’ (Open Day-2026), ಜುಲೈ 27, ಸೋಮವಾರ

    July 26, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.