Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಂಚ ಸ್ವೀಕರಿಸುತ್ತಿದ್ದ ಉಡುಪಿ ಸಹಾಯಕ ಸರಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ
    ಇತ್ತೀಚಿನ ಸುದ್ದಿ

    ಲಂಚ ಸ್ವೀಕರಿಸುತ್ತಿದ್ದ ಉಡುಪಿ ಸಹಾಯಕ ಸರಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

    March 26, 2025
    Share

    ಉಡುಪಿ: ವಶಪಡಿಸಿಕೊಂಡ ಅಕ್ರಮ ಮರಳು ಸಾಗಾಟದ ಲಾರಿಯ ಬಿಡುಗಡೆಯ ಆಕ್ಷೇಪಣೆ ಸಲ್ಲಿಕೆ ಸಂಬಂಧ ಲಂಚ ಸ್ವೀಕರಿಸುತ್ತಿದ್ದ ಆರೋಪದಲ್ಲಿ ಉಡುಪಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕ ಗಣಪತಿ ವಸಂತ ನಾಯ್ಕ್ ಎಂಬವರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

    ಮರಳು ಸಾಗಾಟದ ಲಾರಿ ಬಿಡುಗಡೆಗೆ ಸಂಬಂಧಿಸಿ ಆಕ್ಷೇಪಣೆ ಸಲ್ಲಿಸಲು ಗಣಪತಿ ವಸಂತ ನಾಯ್ಕ್ 3 ಸಾವಿರ ರೂ. ಲಂಚದ ಬೇಡಿಕೆಯನ್ನು ಇಟ್ಟಿದ್ದರು ಎನ್ನಲಾಗಿದೆ. ಲಂಚ ನೀಡಲು ಒಪ್ಪದ ದೂರುದಾರ ಈ ಕುರಿತು ಉಡುಪಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

    ಅದರಂತೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಉಡುಪಿ ನ್ಯಾಯಾಲಯದಲ್ಲಿರುವ ಕಚೇರಿಯಲ್ಲಿ 2ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಗಣಪತಿ ನಾಯ್ಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

    ಲೋಕಾಯುಕ್ತ ಮಂಗಳೂರು ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಉಡುಪಿ ಪ್ರಭಾರ ಡಿವೈಎಸ್ಪಿ ಮಂಜುನಾಥ್, ಪೊಲೀಸ್ ನಿರೀಕ್ಷಕ ರಾಜೇಂದ್ರ ನಾಯಕ್ ಎಂ.ಎನ್., ಎಎಸ್ಸೈ ನಾಗೇಶ್, ಸಿಬ್ಬಂದಿ ನಾಗರಾಜ್, ಸತೀಶ್ ಹಂದಾಡಿ, ರೋಹಿತ್, ಮಲ್ಲಿಕಾ, ಪುಷ್ಪಾವತಿ, ರವೀಂದ್ರ, ರಮೇಶ್, ಅಬ್ದುಲ್ ಜಲಾಲ್, ಪ್ರಸನ್ನ, ರಾಘವೇಂದ್ರ ಹೊಸಕೋಟೆ, ಸುಧೀರ್, ಸತೀಶ್ ಆಚಾರ್ಯ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

    Post Views: 125

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.