Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ವಿಟ್ಲ: ಸರಕಾರಿ ಶಾಲೆಯ ಗೋಡೆಯ ಮೇಲೆ ಅಶ್ಲೀಲ ಬರಹ- ಸ್ವತ್ತುಗಳಿಗೆ ಹಾನಿ ನಡೆಸಿದ ಕಿಡಿಗೇಡಿಗಳು
    ಇತ್ತೀಚಿನ ಸುದ್ದಿ

    ವಿಟ್ಲ: ಸರಕಾರಿ ಶಾಲೆಯ ಗೋಡೆಯ ಮೇಲೆ ಅಶ್ಲೀಲ ಬರಹ- ಸ್ವತ್ತುಗಳಿಗೆ ಹಾನಿ ನಡೆಸಿದ ಕಿಡಿಗೇಡಿಗಳು

    September 5, 2023
    Share

    ವಿಟ್ಲ: ಶಾಲೆಗೆ ನುಗ್ಗಿದ ಕೆಲ ಕಿಡಿಗೇಡಿಗಳು ಸ್ವತ್ತುಗಳಿಗೆ ಹಾನಿ ಮಾಡಿ, ಗೋಡೆಯ ಮೇಲೆ ಅಶ್ಲೀಲ ಬರಹಗಳನ್ನು ಬರೆದಿರುವ ಘಟನೆ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಶಾಲೆಗೆ ಆಗಮಿಸಿದ ವೇಳೆ ಘಟನೆ ಬೆಳಕಿಗೆ ಬಂದಿದೆ.

    ಕಿಡಿಗೇಡಿಗಳು ಶಾಲೆಯ ಎಲ್ಲ ತರಗತಿ ಕೊಠಡಿಯ ಬಾಗಿಲ ಬಳಿ ಮೊಟ್ಟೆ ಒಡೆದಿದ್ದಾರೆ. ಅಲ್ಲದೇ ಒಂದು ಕೊಠಡಿಯ ಕಿಟಕಿಯ ಗಾಜನ್ನು ಒಡೆದಿರುವುದಲ್ಲದೇ, ಮಕ್ಕಳ ಸೃಜನಾತ್ಮಕತೆಗೆ ಒದಗಿಸಿದ ಸೂಚನಾ ಫಲಕದ ಗಾಜು, ಜೊತೆಗೆ ಶಾಲೆಯ ಟ್ಯೂಬ್ ಲೈಟ್‌ಗಳನ್ನು ಒಡೆದು ಹಾಕಿದ್ದಾರೆ. ಪ್ರಾಥಮಿಕ ಶಾಲೆಯ ಗೇಟ್ ಮತ್ತು ಅಡುಗೆ ಕೋಣೆಯ ಬಾಗಿಲಿಗೆ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ವಿದ್ಯಾರ್ಥಿಗಳು ಬಿಡಿಸಿದ್ದ ಸ್ವಾತಂತ್ರ್ಯ ಹೋರಾಟಗಾರರ ಚಿತ್ರಗಳನ್ನು ಹರಿದು ಹಾಕಿದ್ದಾರೆ. ಅಲ್ಲದೆ ಶಾಲೆ ಗೋಡೆ ಮೇಲೆ ಅಶ್ಲೀಲ ಬರಹಗಳನ್ನು ಬರೆದಿದ್ದಾರೆ. ಇದರಿಂದಾಗಿ ಶಾಲೆಯ ದೈನಂದಿನ ತರಗತಿಗೆ ತೊಂದರೆ ಉಂಟಾಗಿದ್ದು, ಈ ಕುರಿತು ಕ್ರಮ ಕೈಗೊಳ್ಳುವಂತೆ ವಿಟ್ಲ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಶಾಲಾ ಮೈದಾನವನ್ನು ಅಕ್ರಮವಾಗಿ ಪ್ರವೇಶಿಸಿರುವ ತಂಡ ಕ್ರಿಕೆಟ್ ಆಡಿ ಬಳಿಕ ಈ ಕೃತ್ಯ ಎಸಗಿರಬಹುದು ಎಂದು ಸಂಶಯಿಸಲಾಗಿದೆ. ಈ ಸಂಬಂಧ ವಿಟ್ಲ ಪೊಲೀಸರು ತನಿಖೆ ಆರಂಭಿಸಿದ್ದಾರೆ.

    Post Views: 217

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.