Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಗಣೇಶ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..! ಈ ನಿಯಮಗಳ ಪಾಲನೆ ಕಡ್ಡಾಯ
    ಇತ್ತೀಚಿನ ಸುದ್ದಿ

    ಗಣೇಶ ಹಬ್ಬ ಆಚರಣೆಗೆ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ..! ಈ ನಿಯಮಗಳ ಪಾಲನೆ ಕಡ್ಡಾಯ

    August 25, 2025
    Share

    ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಸೂಚನೆಗಳನ್ನು ನೀಡಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

    ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು.

    ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ ಹಸಿಕಸ (ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ, ಇತ್ಯಾದಿ ಅಲಂಕಾರಿಕ ವಸ್ತುಗಳು) ಪ್ರತ್ಯೇಕಿಸಿ ಮೂರ್ತಿಗಳೊಂದಿಗೆ ನೀರಿಗೆ ವಿಸರ್ಜಿಸದೆ, ಪ್ರತ್ಯೇಕವಾಗಿ ವಿಲೇವಾರಿ ಮಾಡಲು ಕ್ರಮವಹಿಸುವುದು.

    ಸಾರ್ವಜನಿಕವಾಗಿ ಇಡಲಾಗುವ ಗಣೇಶ ವಿಗ್ರಹಗಳನ್ನು ಕಡ್ಡಾಯವಾಗಿ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಯಿಂದ ನಿಬಂಧನೆಗಳೊಪಟ್ಟ ಅನುಮತಿಗಳನ್ನು ಪಡೆದ ನಂತರವೇ ಸ್ಥಾಪಿಸುವುದು. ಏಕಬಳಕೆ ಪ್ಲಾಸ್ಟಿಕ್ ಉಪಯೋಗಿಸುವುದು ಹಾಗೂ ರಾತ್ರಿ 10.00 ರಿಂದ ಬೆ 6.00 ರವರೆಗೆ ಧ್ವನಿವರ್ಧಕಗಳ ಬಳಕೆ ನಿಷೇಧಿಸಿದೆ. ಹಸಿರು ಪಟಾಕಿಗಳ ಹೊರತಾಗಿ ಯಾವುದೇ ಪಟಾಕಿಗಳನ್ನು ಸುಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

    ಗಣೇಶ ಮೂರ್ತಿಯ ವಿಸರ್ಜನೆ ಸಂದರ್ಭದಲ್ಲಿ ತೆಪ್ಪ ಬಳಕೆ ಮಾಡಿದ್ದಲ್ಲಿ ಕೇವಲ ಎರಡರಿಂದ ಮೂರು ಜನರಿಗೆ ಮಾತ್ರ ತೆಪ್ಪದಲ್ಲಿ ಹೋಗಲು ಅವಕಾಶ. ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸಿಕೊಂಡು ನುರಿತ ಈಜುಗಾರರ ಸಮ್ಮುಖದಲ್ಲಿ ಗಣಪತಿ ವಿಸರ್ಜಿಸಿಸುವುದು.ಆ.27 ರಿಂದ ಸೆ.15ರವರೆಗೆ ಜಿಲ್ಲಾದ್ಯಂತ ಬೈಕ್ ರ್ಯಾಲಿ, ಡಿ.ಜಿ. ಸಿಸ್ಟಂ ಬಳಕೆ ಹಾಗೂ ಕಲರ್ ಪೇಪರ್ ಬ್ಲಾಸ್ಟಿಂಗ್/ ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

    Post Views: 189

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.