Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸರ್ಕಾರದಿಂದ ‘ಗ್ಯಾರಂಟಿ’ ಮಾರ್ಗಸೂಚಿ ಪ್ರಕಟ
    ಇತ್ತೀಚಿನ ಸುದ್ದಿ

    ಸರ್ಕಾರದಿಂದ ‘ಗ್ಯಾರಂಟಿ’ ಮಾರ್ಗಸೂಚಿ ಪ್ರಕಟ

    June 4, 2023
    Share

    ಬೆಂಗಳೂರು : ಕಾಂಗ್ರೆಸ್‌ ನ ಚುನಾವಣಾ ಪ್ರಣಾಳಿಕೆಯಲ್ಲಿನ ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆ. ಸದ್ಯ ಈ ಗ್ಯಾರಂಟಿಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗಳು ಎರಡೂ ಯೋಜನೆಗಳ ಅನುಷ್ಠಾನಕ್ಕೆ ಪ್ರತ್ಯೇಕ ಆದೇಶಗಳನ್ನು ಹೊರಡಿಸಿವೆ.

    ಅನ್ನ ಭಾಗ್ಯ ಯೋಜನೆ ಮಾರ್ಗಸೂಚಿ

    * ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ಕೇಂದ್ರ ಸರ್ಕಾರ ತಿಂಗಳಿಗೆ 35 ಕೆ.ಜಿ. ಆಹಾರಧಾನ್ಯ ಉಚಿತವಾಗಿ ಒದಗಿಸುತ್ತಿದೆ.

    * ಇನ್ನು ಮುಂದೆ ಅಂತ್ಯೋದಯ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಮೂವರು ಸದಸ್ಯರಿದ್ದರೆ ತಿಂಗಳಿಗೆ 35 ಕೆ.ಜಿ. ಆಹಾರ ಧಾನ್ಯ ಉಚಿತವಾಗಿ ದೊರೆಯಲಿದೆ.

    * ಈ ಕುಟುಂಬಗಳಲ್ಲಿ ನಾಲ್ಕು ಜನರಿದ್ದರೆ ತಲಾ 10 ಕೆ.ಜಿ.ಯಂತೆ ಒಟ್ಟು 40 ಕೆ.ಜಿ., ಐವರು ಇದ್ದರೆ ಒಟ್ಟು 50 ಕೆ.ಜಿ. ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಪ್ರತಿ ವ್ಯಕ್ತಿಗೆ ಹತ್ತು ಕೆ.ಜಿ.ಯಂತೆ ಉಚಿತ ಅಕ್ಕಿ ಸಿಗಲಿದೆ.

    * ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಕುಟುಂಬಗಳಲ್ಲಿ ಪ್ರತಿ ಸದಸ್ಯರಿಗೆ ಹತ್ತು ಕೆ.ಜಿ.ಯಂತೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತದೆ.

    * ಅಂತ್ಯೋದಯ ಪಡಿತರ ಚೀಟಿ ಹೊಂದಿದ ಕುಟುಂಬಗಳಿಗೆ ತಲಾ 35 ಕೆ.ಜಿ. ಹಾಗೂ ಬಿಪಿಎಲ್‌ ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ ಐದು ಕೆ.ಜಿ. ಆಹಾರ ಧಾನ್ಯವನ್ನು ಕೇಂದ್ರ ಸರ್ಕಾರವು ಆಹಾರ ಭದ್ರತಾ ಕಾಯ್ದೆಯಡಿ ಉಚಿತವಾಗಿ ಒದಗಿಸುತ್ತಿದೆ. ಹೆಚ್ಚುವರಿ ಆಹಾರ ಧಾನ್ಯದ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ

    .ಯುವ ನಿಧಿ ಮಾರ್ಗಸೂಚಿಗಳು:

    * ಉತ್ತೀರ್ಣರಾದ ನಂತರ ಆರು ತಿಂಗಳವರೆಗೂ ಯಾವುದೇ ಉದ್ಯೋಗ ದೊರಕದ ಕನ್ನಡಿಗರಿಗೆ ಯೋಜನೆ ಅನ್ವಯವಾಗುತ್ತದೆ.

    * ಎರಡು ವರ್ಷಗಳವರೆಗೆ ಯೋಜನೆಯಡಿ ನಿರುದ್ಯೋಗ ಭತ್ಯೆ ಪಡೆಯಬಹುದು. ಎರಡು ವರ್ಷಕ್ಕೂ ಮೊದಲೇ ಉದ್ಯೋಗ ದೊರೆತರೆ ಭತ್ಯೆ ಪಾವತಿ ಸ್ಥಗಿತಗೊಳಿಸಲಾಗುತ್ತದೆ.

    * ನಿರುದ್ಯೋಗ ಸ್ಥಿತಿಯ ಕುರಿತು ಸ್ವತಂತ್ರ ಪರಿಶೀಲನೆ ನಡೆಸಲಾಗುತ್ತದೆ. ಉದ್ಯೋಗ ದೊರಕಿದ ಕುರಿತು ತಪ್ಪು ಮಾಹಿತಿ ನೀಡಿದರೆ ಅಥವಾ ಘೋಷಣೆ ಮಾಡದಿದ್ದರೆ ದಂಡ ವಿಧಿಸಲಾಗುತ್ತದೆ.

    * ನೇರ ನಗದು ಪಾವತಿ ವ್ಯವಸ್ಥೆ ಮೂಲಕ ನಿರುದ್ಯೋಗ ಭತ್ಯೆ ಪಾವತಿ ಮಾಡಲಾಗುತ್ತದೆ.

    ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುತ್ತದೆ. ಯಾರಿಗೆಲ್ಲ ಭತ್ಯೆ ಇಲ್ಲ?:

    * ಪದವಿ ಅಥವಾ ಡಿಪ್ಲೊಮಾ ನಂತರ ಉನ್ನತ ವ್ಯಾಸಂಗಕ್ಕೆ ಪ್ರವೇಶ ಪಡೆದಿರುವವರು.

    * ಶಿಶಿಕ್ಷು (ಅಪ್ರೆಂಟಿಸ್‌ಶಿಪ್‌) ವೇತನ ಪಡೆಯುತ್ತಿರುವವರು. * ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು.

    * ರಾಜ್ಯ ಮತ್ತು ಕೇಂದ್ರದ ವಿವಿಧ ಯೋಜನೆಗಳಡಿ ಹಾಗೂ ಬ್ಯಾಂಕ್‌ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿದವರು.

    Post Views: 203

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.