Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯದ ಜನರೇ ಎಚ್ಚರ… ವಕ್ಕರಿಸಿದೆ ಹಕ್ಕಿ ಜ್ವರ! ಸಾಕಣೆ ಕೇಂದ್ರದಲ್ಲಿ H5N1 ಪತ್ತೆ
    ಇತ್ತೀಚಿನ ಸುದ್ದಿ

    ರಾಜ್ಯದ ಜನರೇ ಎಚ್ಚರ… ವಕ್ಕರಿಸಿದೆ ಹಕ್ಕಿ ಜ್ವರ! ಸಾಕಣೆ ಕೇಂದ್ರದಲ್ಲಿ H5N1 ಪತ್ತೆ

    April 17, 2026
    Share

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಕ್ಕಿ ಜ್ವರದ (Bird Flu) ಭೀತಿ ಎದುರಾಗಿದ್ದು, ನಗರದ ಹೊರವಲಯದ ಹೆಸರಘಟ್ಟದಲ್ಲಿರುವ ಸರ್ಕಾರಿ ಪೌಲ್ಟ್ರಿ ಫಾರಂನಲ್ಲಿ ಎಚ್5ಎನ್1 (H5N1) ವೈರಸ್ ದೃಢಪಟ್ಟಿದೆ. ಕೇಂದ್ರ ಸರ್ಕಾರದ ಅನುಮತಿಯ ಮೇರೆಗೆ ನಡೆಸಲಾದ ಮೊದಲ ಹಂತದ ತಪಾಸಣೆಯಲ್ಲೇ ಈ ಮಾರಕ ವೈರಸ್ ಪತ್ತೆಯಾಗಿರುವುದು ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

    ಹೆಸರಘಟ್ಟದ ಪಶುಸಂಗೋಪನಾ ಇಲಾಖೆಯ ಅಧೀನದಲ್ಲಿರುವ ಪೌಲ್ಟ್ರಿ ಫಾರಂನಲ್ಲಿ ಕಳೆದ ಕೆಲವು ದಿನಗಳಿಂದ ಕೋಳಿಗಳು ಅಸಹಜವಾಗಿ ಮೃತಪಡುತ್ತಿದ್ದವು. ಈ ಹಿನ್ನೆಲೆಯಲ್ಲಿ ನಡೆಸಲಾದ ಪ್ರಯೋಗಾಲಯ ಪರೀಕ್ಷೆಯ ವರದಿಯು ಹಕ್ಕಿ ಜ್ವರವನ್ನು ಖಚಿತಪಡಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸೋಂಕಿತ ಫಾರಂನಲ್ಲಿದ್ದ ಸಾವಿರಾರು ಕೋಳಿಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ಗುಂಡಿ ತೆಗೆದು ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗಿದ್ದು, ಇಡೀ ಪ್ರದೇಶವನ್ನು ಸ್ಯಾನಿಟೈಸ್ ಮಾಡಲಾಗಿದೆ.

    ಹೆಸರಘಟ್ಟದ ಈ ಪ್ರಮುಖ ಫಾರಂನಿಂದ ರಾಜ್ಯದ ವಿವಿಧ ಭಾಗಗಳಿಗೆ ಕೋಳಿಗಳನ್ನು ಸರಬರಾಜು ಮಾಡಲಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಪಶು ವೈದ್ಯಾಧಿಕಾರಿಗಳು, ಸುತ್ತಮುತ್ತಲಿನ ಗ್ರಾಮ ಪಂಚಾಯಿತಿಗಳಿಗೆ ತುರ್ತು ನೋಟಿಸ್ ಜಾರಿ ಮಾಡಿದ್ದಾರೆ. ಸೋಂಕು ಪತ್ತೆಯಾದ ಸ್ಥಳದಿಂದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ‘ಸೋಂಕಿತ ವಲಯ’ ಎಂದು ಘೋಷಿಸಲಾಗಿದ್ದು, ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಖಾಸಗಿ ಕೋಳಿ ಸಾಕಾಣಿಕೆ ಶೆಡ್‌ಗಳು ಮತ್ತು ಮಾಂಸದ ಅಂಗಡಿಗಳಲ್ಲಿ ಕಡ್ಡಾಯ ತಪಾಸಣೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ.

    ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿ ಮತ್ತು ಸಾಕಾಣಿಕೆದಾರರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸಲಾಗಿದೆ. ಬಿಸಿಲಿನ ತಾಪಮಾನ ಏರಿಕೆಯಾಗುತ್ತಿರುವ ಬೆನ್ನಲ್ಲೇ ಈ ವೈರಸ್ ಕಾಣಿಸಿಕೊಂಡಿರುವುದು ಪೌಲ್ಟ್ರಿ ಉದ್ಯಮಕ್ಕೂ ಆತಂಕ ತಂದಿದೆ.

    ಹಕ್ಕಿ ಜ್ವರದ ಹಿನ್ನೆಲೆಯಲ್ಲಿ ಚಿಕನ್ ಪ್ರಿಯರು ಎಚ್ಚರವಹಿಸುವಂತೆ ವೈದ್ಯಕೀಯ ತಜ್ಞರು ಸೂಚಿಸಿದ್ದಾರೆ. ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ (ಕನಿಷ್ಠ 70°C ಗಿಂತ ಹೆಚ್ಚಿನ ಉಷ್ಣಾಂಶದಲ್ಲಿ) ಸೇವಿಸುವುದರಿಂದ ವೈರಸ್ ಹರಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅರೆಬರೆ ಬೇಯಿಸಿದ ಅಥವಾ ಹಸಿ ಮಾಂಸದ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ.

    ಸದ್ಯ ಪರಿಸ್ಥಿತಿಯನ್ನು ಹತೋಟಿಗೆ ತರಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತಂಡಗಳು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಯಾವುದೇ ಅಧಿಕೃತ ಮಾಹಿತಿ ಇಲ್ಲದೆ ಆತಂಕಕ್ಕೆ ಒಳಗಾಗಬಾರದೆಂದು ಮನವಿ ಮಾಡಲಾಗಿದೆ.

    Post Views: 165

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.