Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಅಪ್ಪನಿಂದ ಮಗಳಿಗೆ ಅಧಿಕಾರ ಹಸ್ತಾಂತರ- ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪರೂಪದ ಘಟನೆ
    ಇತ್ತೀಚಿನ ಸುದ್ದಿ

    ಅಪ್ಪನಿಂದ ಮಗಳಿಗೆ ಅಧಿಕಾರ ಹಸ್ತಾಂತರ- ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಪರೂಪದ ಘಟನೆ

    June 21, 2023
    Share

    ಮಂಡ್ಯ; ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ.ಎಸ್. ವೆಂಕಟೇಶ್ ವರ್ಗಾವಣೆಗೊಂಡಿದ್ದು ಅವರು ಠಾಣೆಯ ನೂತನ ಎಸ್‌ಐ ಬಿ.ವಿ.ವರ್ಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ.

    ವಿಶೇಷ ಏನೆಂದರೆ ಬಿ.ಎಸ್. ವೆಂಕಟೇಶ್ ಅವರ ಪುತ್ರಿಯಾಗಿದ್ದು ವರ್ಷಾ, ಇದೀಗ ಅಪ್ಪ- ಮಗಳಿಗೆ ಅಧಿಕಾರ ಹಸ್ತಾಂತರಿಸಿ ಸುದ್ದಿಯಾಗಿದ್ದಾರೆ‌.

    ತುಮಕೂರು ಜಿಲ್ಲೆ ಹುಲಿಯೂರುದುರ್ಗದವರಾದ ವೆಂಕಟೇಶ್ 16 ವರ್ಷ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ನಂತರ ಮಾಜಿ ಸೈನಿಕರ ಕೋಟಾದಲ್ಲಿ 2010ರಲ್ಲಿ ಪಿಎಸ್‌ಐ ಆಗಿ ಆಯ್ಕೆಯಾಗಿದ್ದರು.

    ಬಳಿಕ ಅವರು ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಯ ಹಲವೆಡೆ ಕಾರ್ಯನಿರ್ವಹಿಸಿ ಮಂಡ್ಯ ಸೆಂಟ್ರಲ್ ಠಾಣೆಯಲ್ಲಿ ಒಂದೂವರೆ ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದರು.

    ಅವರನ್ನು ಇದೀಗ ಮಂಡ್ಯ ಎಸ್.ಪಿ. ಕಚೇರಿಗೆ ವರ್ಗಾವಣೆ ಮಾಡಲಾಗಿದ್ದು, ಇದೇ ಠಾಣೆಗೆ ನೂತನ ಎಸ್‌ಐ ಆಗಿ ಬಂದಿರುವ ತಮ್ಮ ಪುತ್ರಿ ಬಿ.ವಿ. ವರ್ಷಾ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ. ವರ್ಷಾ 2022 ನೇ ಬ್ಯಾಚ್ ನ ಪಿಎಸ್ ಐ ಆಗಿದ್ದು ಕಲ್ಬುರ್ಗಿಯಲ್ಲಿ ತರಬೇತಿ ಮುಗಿಸಿ ಮಂಡ್ಯದಲ್ಲಿ ಒಂದು ವರ್ಷ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ

    Post Views: 298

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.