Facebook Twitter Instagram
    Thursday, April 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹನಿ ಮಂಗಳೂರು ಪ್ರಕರಣಕ್ಕೂ ನವಸಹಜ ಸಮುದಾಯ ಸಂಘಟನೆಗೂ ಯಾವುದೇ ಸಂಬಂಧವಿಲ್ಲ : ಸಮಗ್ರ ತನಿಖೆ ನಡೆಯಲಿ – ನಿಖಿಲಾ
    ಇತ್ತೀಚಿನ ಸುದ್ದಿ

    ಹನಿ ಮಂಗಳೂರು ಪ್ರಕರಣಕ್ಕೂ ನವಸಹಜ ಸಮುದಾಯ ಸಂಘಟನೆಗೂ ಯಾವುದೇ ಸಂಬಂಧವಿಲ್ಲ : ಸಮಗ್ರ ತನಿಖೆ ನಡೆಯಲಿ – ನಿಖಿಲಾ

    April 15, 2026
    Share

    ಮಂಗಳೂರು : ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರ್ಕಾರದ ಸೌಲಭ್ಯಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಘಟನೆಗಳನ್ನು ಖಂಡಿಸಿ ‘ನವಸಹಜ ಸಮುದಾಯ ಸಂಘಟನೆ’ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿತು.ನಕಲಿ ಗುರುತಿನ ಚೀಟಿ ಪಡೆದವರ ವಿರುದ್ಧ ಹಾಗೂ ಅದಕ್ಕೆ ಸಹಕರಿಸಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆ ಆಗ್ರಹಿಸಿದೆ.

    ದ.ಕ ಜಿಲ್ಲಾ ನವಸಹಜ ಸಂಘಟನೆಯ ಅಧ್ಯಕ್ಷೆ ನಿಖಿಲಾ ಮಾತನಾಡಿ, “ರಾಯಚೂರು ಮೂಲದ ಹನಿ ಮಂಗಳೂರು ಕಳೆದ 4-5 ವರ್ಷಗಳಿಂದ ಮಂಗಳೂರಿನಲ್ಲಿ ವಾಸವಾಗಿದ್ದು, ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ ಮೈಸೂರಿನ ವ್ಯಕ್ತಿಯನ್ನು ನಗರಕ್ಕೆ ಕರೆಸಿಕೊಂಡಿದ್ದಾಳೆ. ಸಂಘಟನೆಗೆ ಮಾಹಿತಿ ನೀಡದೆ ಆ ವ್ಯಕ್ತಿಗೆ ಮಂಗಳೂರಿನ ವಿಳಾಸದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಮಹಿಳಾ ಅಭಿವೃದ್ಧಿ ನಿಗಮಕ್ಕೆ ತಪ್ಪು ಮಾಹಿತಿ ನೀಡಿ ರಾಷ್ಟ್ರೀಯ ಟ್ರಾನ್ಸ್‌ಜೆಂಡರ್ ಗುರುತಿನ ಚೀಟಿ ಮಾಡಿಸಲಾಗಿದೆ. ಬಳಿಕ ಆ ವ್ಯಕ್ತಿ ಮೈಸೂರಿಗೆ ತೆರಳಿ, ಮಂಗಳೂರಿನ ಸಮುದಾಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೂ ಸಂಘಟನೆಗೂ ಯಾವುದೇ ಸಂಬಂಧ ಇಲ್ಲ,” ಎಂದು ಸ್ಪಷ್ಟಪಡಿಸಿದರು.

    ಇತ್ತೀಚೆಗೆ ಜಿಲ್ಲಾಧಿಕಾರಿಗಳ ಸಭೆಯಲ್ಲಿ 50 ಮಂದಿಗೆ ಟಿಜಿ ಕಾರ್ಡ್ ವಿತರಿಸಿರುವ ಮಾಹಿತಿ ತಿಳಿದುಬಂದಿದ್ದು, ಅವುಗಳಲ್ಲಿ ಅನೇಕವು ನಕಲಿಯಾಗಿರುವ ಅನುಮಾನವಿದೆ ಎಂದ ಅವರು, “ನೈಜ ಮಂಗಳಮುಖಿಯರಿಗೆ ಇದರಿಂದ ಅನ್ಯಾಯವಾಗುತ್ತಿದೆ. ಭಿಕ್ಷಾಟನೆ ಮೂಲಕ ಸುಲಭವಾಗಿ ಹಣ ಸಂಪಾದಿಸಲು ಕೆಲವರು ನಕಲಿ ಕಾರ್ಡ್‌ಗಳನ್ನು ಮಾಡಿಸುತ್ತಿದ್ದಾರೆ. ಈ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿಗಳು ಮತ್ತು ಮಹಿಳಾ ಅಭಿವೃದ್ಧಿ ನಿಗಮಕ್ಕೆ ಸೂಚನೆ ನೀಡಿದ್ದೇವೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

    ಮಂಗಳೂರಿನಲ್ಲಿ ಹೊರ ಜಿಲ್ಲೆಗಳ ಹಾಗೂ ಹಿಂದಿ ಭಾಷಿಕರ ಸಂಖ್ಯೆ ಹೆಚ್ಚಾಗಿದ್ದು, ಕೆಲವರು ಮಂಗಳಮುಖಿಯರ ವೇಷದಲ್ಲಿ ಸಿಗ್ನಲ್‌ಗಳಲ್ಲಿ ಭಿಕ್ಷಾಟನೆ ನಡೆಸುತ್ತಿರುವುದು ಕಂಡುಬರುತ್ತಿದೆ. ಇವರನ್ನು ಒಬ್ಬ ‘ಗುರು’ ಸಂಘಟಿತವಾಗಿ ನಡೆಸುತ್ತಿರುವ ಶಂಕೆಯಿದೆ. ಕೆಲವರು ಕುಟುಂಬವಿದ್ದರೂ ಟಿಜಿ ಕಾರ್ಡ್ ಪಡೆದಿರುವುದು ಗಮನಕ್ಕೆ ಬಂದಿದೆ. ಇದರಿಂದ ನೈಜ ಸಮುದಾಯದವರಿಗೆ ಕೆಟ್ಟ ಹೆಸರು ಬರುತ್ತಿದೆ ಎಂದು ನಿಖಿಲಾ ಅಸಮಾಧಾನ ವ್ಯಕ್ತಪಡಿಸಿದರು.

    ಹನಿ ನಮ್ಮ ಸಂಘಟನೆಯ ಬೋರ್ಡ್ ಸದಸ್ಯೆಯಾಗಿದ್ದರೂ, ನಂಜನಗೂಡಿನ ವ್ಯಕ್ತಿಗೆ ಗುರುತಿನ ಚೀಟಿ ಮಾಡಿಸಿದ ಬಗ್ಗೆ ಮಾಹಿತಿ ಮುಚ್ಚಿಟ್ಟಿದ್ದಾಳೆ. ಆಕೆಯ ಅಕ್ರಮಕ್ಕೆ ಸಹಕರಿಸಿದವರ ಬಗ್ಗೆ ಸಮಗ್ರ ತನಿಖೆ ನಡೆಯಬೇಕು. ಗುರುತಿನ ಚೀಟಿ ಕಳೆದುಹೋಗಿದೆ ಎಂಬ ಆಕೆಯ ಹೇಳಿಕೆ ಸುಳ್ಳಾಗಿದ್ದು, ಕಳೆದುಹೋಗಿದ್ದರೆ ದೂರು ನೀಡಬೇಕಾಗಿತ್ತು ಎಂದು ಅವರು ಹೇಳಿದರು. ಯಾರೊಬ್ಬರೂ ಮಾಡಿದ ತಪ್ಪಿಗೆ ಇಡೀ ಸಮುದಾಯ ಬಲಿಯಾಗಬಾರದು. ದಕ್ಷಿಣ ಕನ್ನಡ ಜಿಲ್ಲೆಯ ನೈಜ ಮಂಗಳಮುಖಿಯರಿಗೆ ನ್ಯಾಯ ಸಿಗಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘಟನೆಯ ಸದಸ್ಯರಾದ ಅರುಂಧತಿ, ಪ್ರೇಮಾ, ಖುಷಿ, ವೃಂದಾ ಹಾಗೂ ದೀಕ್ಷಾ ಮಂಗಳೂರು ಉಪಸ್ಥಿತರಿದ್ದರು.

    Post Views: 67

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.