ವಿಟ್ಲ: ಶಾಲಾ ವಿದ್ಯಾರ್ಥಿನಿಯೊಬ್ಬಳಿಗೆ ಕಿರುಕುಳ ನೀಡಿದ ಆರೋಪದಲ್ಲಿ ಯುವಕನ ವಿರುದ್ದ ವಿಟ್ಲ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಪೆರುವಾಯಿ ಮೂಲದ ಯುವಕನೋರ್ವ ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಹಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಶಾಲೆ ಸಮೀಪ ಬಂದು ಬಾಲಕಿಯನ್ನು ಬೈಕ್ ನಲ್ಲಿ ಕೂರುವಂತೆ ಹೇಳಿದ್ದು, ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಠಾಣೆಗೆ ದೂರು ನೀಡಿದ್ದಾರೆ.