Facebook Twitter Instagram
    Friday, July 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!! ಯುವಕನ ಕಿರುಕುಳ ಶಂಕೆ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: 10ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ..!! ಯುವಕನ ಕಿರುಕುಳ ಶಂಕೆ

    November 13, 2025
    Share

    ಉಪ್ಪಿನಂಗಡಿ: 10ನೇ ತರಗತಿವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ ನಡೆದಿದೆ.ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, ನವೆಂಬ‌ರ್ 4ರಂದು ತಲೆನೋವು ಇದೆ ಎಂದು ಹೇಳಿ ಶಾಲೆಗೆ ತೆರಳದೇ ಮನೆಯಲ್ಲಿಯೇ ಇದ್ದಾಳೆ.

    ಈ ಸಂದರ್ಭಮನೆಯಲ್ಲಿ ಇದ್ದ ಹುಲ್ಲಿಗೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿ ಅಸ್ವಸ್ಥಗೊಂಡಿದ್ದಾಳೆ.ವಿಷಯ ತಿಳಿದ ತಕ್ಷಣ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಗೀತಾ ಮನೆಗೆ ಬಂದು, ಆಟೋರಿಕ್ಷಾದ ಮೂಲಕ ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಆರೈಕೆಗೆ 108 ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹರ್ಷಿತಾ ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 12ರಂದು ಬೆಳಗ್ಗೆ 1.00 ಗಂಟೆ ಸುಮಾರಿಗೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ದೃಢಪಡಿಸಿದ್ದಾರೆ.

    ಮೃತಳ ತಂದೆ ನೀಡಿರುವ ದೂರಿನಂತೆ, ಕಡಬದ ರಾಜೇಶ್ ಎಂಬಾತ ಫೋನ್ ಮೂಲಕ ಕಿರುಕುಳ ನೀಡುತ್ತಿದ್ದ ಶಂಕೆ ಇದ್ದು, ಇದೇ ಕಾರಣದಿಂದ ಮಗಳು ಆತ್ಮಹತ್ಯೆಗೆ ಮುಂದಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಹೊರತಾಗಿ ಸಾವಿಗೆ ಬೇರೆ ಕಾರಣದ ಬಗ್ಗೆ ಮಾಹಿತಿ ಇಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹರ್ಷಿತಾಳ ಮೃತದೇಹ ಮಂಗಳೂರು ವೆನ್‌ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರಿದಿದೆ.

    Post Views: 162

    Related Posts

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಮಹಿಳೆಗೆ ಬೆದರಿಕೆ, ನಗದು ಕಳವು ಆರೋಪ- ಇಬ್ಬರ ವಿರುದ್ಧ FIR

    July 24, 2026

    AI ಬಳಸಿ 121 ನಕಲಿ ಬ್ಯಾಂಕಿಂಗ್ ಆ್ಯಪ್ ತಯಾರಿ : 17 ವರ್ಷದ ಬಾಲಕನಿಂದ ₹64.38 ಕೋಟಿ ವಂಚನೆ!!

    July 23, 2026

    ಪುತ್ತೂರು: ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ- ಅತ್ತೆ, ಮಾವ, ನಾದಿನಿ ಅರೆಸ್ಟ್

    July 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.