ಚಿಕ್ಕಮಗಳೂರು : ನೇಣು ಬಿಗಿದುಕೊಂಡು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯಲ್ಲಿ ನಡೆದಿದೆ. ಕಾಂತರಾಜ್ (45) ಮೃತ ದುರ್ದೈವಿ.
ಕಾಂತರಾಜ್ ಎಸ್ಪಿ ಕಚೇರಿಯಲ್ಲಿ ಕಂಪ್ಯೂಟರ್ ಸೆಕ್ಷನ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಕಾಂತರಾಜ್ ಅಪಘಾತದಲ್ಲಿ ಬಲಗಾಲು ಕಳೆದುಕೊಂಡಿದ್ದರು. ಕೃತಕ ಕಾಲು ಜೋಡಣೆ ಮೂಲಕ ಕಾಂತರಾಜ್ ಕೆಲಸ ಮಾಡುತ್ತಿದ್ದರು. ಅಪಘಾತದಲ್ಲಿ ಕಾಲು ಕಳೆದುಕೊಂಡಾಗಿನಿಂದ ಮಾನಸಿಕ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಈ ಹಿಂದೆ ಎ.ಎನ್.ಎಫ್. ಹಾಗೂ ಕಳಸ ಠಾಣೆಯಲ್ಲಿ ಕಾಂತರಾಜ್ ಕರ್ತವ್ಯ ನಿರ್ವಹಿಸಿದ್ದರು. ಇಂದು ಮನೆಯಲ್ಲಿ ಯಾರು ಇಲ್ಲದೆ ವೇಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾಂತರಾಜ್ ತರೀಕೆರೆ ತಾಲೂಕಿನ ಸುಣ್ಣದಹಳ್ಳಿಯವರಾಗಿದ್ದಾರೆ.



