Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶ- ಹಲ್ಲೆ ಆರೋಪ-ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಬಂಧನ
    ಇತ್ತೀಚಿನ ಸುದ್ದಿ

    ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶ- ಹಲ್ಲೆ ಆರೋಪ-ಕಡಬ ಠಾಣಾ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಬಂಧನ

    December 5, 2025
    Share

    ಕಡಬ: ತಡರಾತ್ರಿ ಮನೆಗೆ ಅಕ್ರಮ ಪ್ರವೇಶಿಸಿ ಮನೆಯ ಸದಸ್ಯರಿಗೆ ಹಲ್ಲೆ ನಡೆಸಿದ ಆರೋಪದಲ್ಲಿ ಕಡಬ ಠಾಣೆಯ ಹೆಡ್ ಕಾನ್‌ಸ್ಟೇಬಲ್ ರಾಜು ನಾಯ್ಕ ಎಂಬಾತನನ್ನು ಬಂಧಿಸಲಾಗಿದ್ದು ಸೇವೆಯಿಂದ ಅಮಾನತುಗೊಳಿಸಲಾಗಿದೆ.

    ಕಡಬ ತಾಲೂಕು ಕೊಯಿಲ ನಿವಾಸಿ ಬಾಬು ಗೌಡ ಎಂಬವರ ಮನೆಯ ಸಮೀಪವಿರುವ ಅವರ ಸಹೋದರ ಹರೀಶ ಎಂಬವರ ಮನೆಗೆ ಡಿ.3ರಂದು ತಡರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಅಕ್ರಮ ಪ್ರವೇಶಿಸಿದ್ದು , ಮನೆಯ ಸದಸ್ಯರು ಆತನನ್ನು ಹಿಡಿದುಕೊಂಡಿದ್ದು, ಈ ವೇಳೆ ಆತ ತಪ್ಪಿಸಿಕೊಳ್ಳುವ ಉದ್ದೇಶದಿಂದ ಮನೆಯ ಸದಸ್ಯ ಚೇತನ್ ಎಂಬಾತನಿಗೆ ಕೈಯಿಂದ ಹಲ್ಲೆ ಮಾಡಿದ್ದಾನೆ.

    ಈ ವೇಳೆ ಆತನನ್ನು ಉಳಿದವರ ಸಹಾಯದಿಂದ ಹಿಡಿದು ವಿಚಾರಿಸಿದಾಗ ಅಪರಿಚಿತ ವ್ಯಕ್ತಿ ಕಡಬ ಪೊಲೀಸ್ ಠಾಣೆಯ ಹೆಚ್.ಸಿ.ರಾಜು ನಾಯ್ಕ್ ಎಂದು ತಿಳಿದುಬಂದಿದೆ. ಸದ್ರಿ ರಾಜು ನಾಯ್ಕ‌ ತಡರಾತ್ರಿ ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ, ಮನೆಯ ಸದಸ್ಯರಿಗೆ ಕೈಯಿಂದ ಹಲ್ಲೆ ನಡೆಸಿದ ಬಗ್ಗೆ ಬಾಬು ಗೌಡ ಅವರು ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಈ ದೂರಿನ ಹಿನ್ನೆಲೆಯಲ್ಲಿ ಆರೋಪಿ ರಾಜು ನಾಯ್ಕ ರವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಹಾಗೂ ಆತನನ್ನು ತಕ್ಷಣ ಕರ್ತವ್ಯದಿಂದ ಅಮಾನತುಗೊಳಿಸಲಾಗಿರುತ್ತದೆ ಎಂದು ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆ ತಿಳಿಸಿದೆ.

    Post Views: 262

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.