Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಲಾಡ್ಜಿನಲ್ಲಿ ಸಾವು!
    ಇತ್ತೀಚಿನ ಸುದ್ದಿ

    ಉಡುಪಿ: ಕಿರಿಯ ಆರೋಗ್ಯ ವೀಕ್ಷಣಾಧಿಕಾರಿ ಲಾಡ್ಜಿನಲ್ಲಿ ಸಾವು!

    September 6, 2024
    Share

    ಉಡುಪಿ : ಕರ್ನಾಟಕ ಸರ್ಕಾರದ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ವೀಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಒಬ್ಬ ಖಾಸಗಿ ಲಾಡ್ಜ್ ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಕುಂದಾಪುರದ ಜೆಕೆ ಟವರ್ಸ್ ಎಂಬಲ್ಲಿ ನಡೆದಿದೆ. ಸಾವನ್ನಪ್ಪಿದ ವ್ಯಕ್ತಿಯನ್ನು ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶಿವಮೊಗ್ಗ ಮೂಲದ ಪ್ರಶಾಂತ್ (37) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಮೂಲದ ಪ್ರಶಾಂತ್ ವಿವಾಹಿತನಾಗಿದ್ದು, ಒಂದು ಪುಟ್ಟ ಮಗುವಿದೆ. ಈತನಿಗೆ ಕುಡಿತದ ಚಟವಿತ್ತು ಎನ್ನಲಾಗಿದೆ. 2010ರಲ್ಲಿ ಆರೋಗ್ಯ ಇಲಾಖೆಗೆ ಸೇರಿದ್ದ ಪ್ರಶಾಂತ್ ಕಾರ್ಕಳದಲ್ಲಿ ಸೇವೆಗೆ ಸೇರಿದ್ದರು. ಬಳಿಕ  ಕುಂದಾಪುರ ತಾಲೂಕಿನ ಕೊರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ಶಿಕ್ಷಣಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ. ಬಳಿಕ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಯಾಗಿದ್ದ ಎಂದು ತಿಳಿದುಬಂದಿದೆ. ಮಾನಸಿಕವಾಗಿ ನೊಂದಿದ್ದು ತನ್ನ ಸ್ನೇಹಿತರ ಜೊತೆಗೆ ಜೀವನದಲ್ಲಿ ಜಿಗುಪ್ಸೆ ಉಂಟಾಗಿದೆ ಎಂದು ಆಗಾಗ ಹೇಳಿಕೊಳ್ಳುತ್ತಿದ್ದ ಎನ್ನಲಾಗಿದೆ. ಸ್ನೇಹಿತರು ಆತನಿಗೆ ಬುದ್ಧಿ ಹೇಳಿ ಸಮಾಧಾನಿಸುತ್ತಿದ್ದರು.  ಆದರೆ ಗುರುವಾರ ಕುಂದಾಪುರದ ಖಾಸಗಿ ಲಾಡ್ಜ್ ನಲ್ಲಿ ರೂಮ್ ಪಡೆದಿದ್ದು, ಮಲಗಿದ ಸ್ಥಿತಿಯಲ್ಲಿ ಸಾವನ್ನಪ್ಪಿದ ಆತ ಯಾವುದೋ ವಿಷ ಪದಾರ್ಥ ಸೇವಿಸಿರಬಹುದೇ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರಬಹುದೇ ಎನ್ನುವ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಸರ್ಕಾರೀ ಆಸ್ಪತ್ರೆಯಲ್ಲಿ ಮರಣೋತ್ತರ ಶವ ಪರೀಲ್ಷೆ ಬಳಿಕ ಸಾವಿನ ನಿಖರವಾದವಕಾರಣ ತಿಳಿದು ಬರಲಿದೆ. ಕುಂದಾಪುರ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸುತ್ತಿದ್ದಾರೆ.

    Post Views: 204

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.