Facebook Twitter Instagram
    Sunday, July 26
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!
    ಕರಾವಳಿ ಸುದ್ದಿ

    ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕ ಮೃತ್ಯು ..!!!

    February 23, 2025
    Share

    ಉಪ್ಪಿನಂಗಡಿ: ಹೃದಯಾಘಾತದಿಂದ ನವವಿವಾಹಿತ ಯುವಕನೋರ್ವ ಮೃತಪಟ್ಟ ದಾರುಣ ಘಟನೆ 34 ನೆಕ್ಕಿಲಾಡಿಯ ಕೊಳಕ್ಕೆ ಎಂಬಲ್ಲಿ ನಡೆದಿದೆ.

    ಕೊಳಕ್ಕೆ ನಿವಾಸಿ ದಿ. ಕೃಷ್ಣಪ್ಪ ನಾಯ್ಕ ಎಂಬವರ ಪುತ್ರ ಕೇಶವ ಕೆ. (28 ವ.) ಮೃತಪಟ್ಟವರು.
    ಇಲ್ಲಿನ ವೈನ್‌ ಶಾಪ್ ವೊಂದರಲ್ಲಿ ಉದ್ಯೋಗಿಯಾಗಿದ್ದ ಇವರಿಗೆ ಎರಡು ದಿನಗಳಿಂದ ಜ್ವರವಿದ್ದು, ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯೊಂದರಿಂದ ಔಷಧಿ ಪಡೆದುಕೊಂಡಿದ್ದರು.

    ಶನಿವಾರ ನಸುಕಿನ ಜಾವ ಸುಮಾರು 3 ಗಂಟೆಗೆ ಪತ್ನಿ ಎಚ್ಚರಗೊಂಡು ಇವರನ್ನು ನೋಡಿದಾಗ ಮಲಗಿದ್ದ ಹಾಸಿಗೆಯಲ್ಲಿಯೇ ಎದ್ದು ಕುಳಿತು ಗೋಡೆಗೊರಗಿ ಎದೆಯ ಬಳಿ ತನ್ನ ಕೈಯನ್ನಿಟ್ಟುಕೊಂಡ ಸ್ಥಿತಿಯಲ್ಲಿ ಕಂಡು ಬಂದಿದ್ದರು. ಪತ್ನಿ ಮಾತನಾಡಲೆತ್ನಿಸಿದಾಗ ಇವರು ಮಾತನಾಡುವ ಸ್ಥಿತಿಯಲ್ಲಿ ಇರಲಿಲ್ಲ. ಕೂಡಲೇ ನೆರೆಹೊರೆಯವರ ಸಹಕಾರದೊಂದಿಗೆ ಇವರನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲೇ ಅವರು ಮೃತರಾಗಿದ್ದಾರೆ.
    ಕೇಶವರವರು ಪ್ರಾಮಾಣಿಕ ದುಡಿಮೆಯಿಂದ ತನ್ನ ಬದುಕನ್ನು ಕಟ್ಟಿಕೊಂಡಿದ್ದರು.’ ಸುಮಾರು ಒಂದೂವರೆ ವರ್ಷದ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಮೂರು ತಿಂಗಳ ಹಸುಗೂಸು ಇದೆ. ಎಲ್ಲರೊಂದಿಗೂ ನಗು ಮುಖದಿಂದಲೇ ಮಾತನಾಡುತ್ತಿದ್ದ ಇವರು ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು. ಮೃತರು ಪತ್ನಿ ಸಂಧ್ಯಾ ಹಾಗೂ ಮೂರು ತಿಂಗಳ ಹಸುಗೂಸನ್ನು ಅಗಲಿದ್ದಾರೆ.

    Post Views: 154

    Related Posts

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026

    ಖೋಟಾ ನೋಟು ಚಲಾಯಿಸಲು ಯತ್ನ : ಇಬ್ಬರು ಅರೆಸ್ಟ್!

    July 25, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ನೀಟ್ ಹಗರಣ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ..!!

    July 25, 2026

    ಮಂಗಳೂರು: ಯುವಕನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ..!!

    July 25, 2026

    ನಕಲಿ ಪಿಎಚ್‌ಡಿ ಹಗರಣ ಬಯಲು: 249 ಅತಿಥಿ ಉಪನ್ಯಾಸಕರಿಗೆ ವಜಾ, FIR ಆದೇಶ

    July 25, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.