Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೃದಯಾಘಾತಕ್ಕೆ 8 ತಿಂಗಳ ಮಗು ಬಲಿ; ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರಿಗೆ ದೂರು
    ಇತ್ತೀಚಿನ ಸುದ್ದಿ

    ಹೃದಯಾಘಾತಕ್ಕೆ 8 ತಿಂಗಳ ಮಗು ಬಲಿ; ಆಸ್ಪತ್ರೆಯ ವಿರುದ್ಧ ಆರೋಗ್ಯ ಸಚಿವರಿಗೆ ದೂರು

    June 19, 2023
    Share

    ಕೊಟ್ಟಾಯಂ: ಎಂಟು ತಿಂಗಳ ಮಗುವೊಂದು ಹೃದಯಾಘಾತಕ್ಕೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ನಿರ್ಲಕ್ಷ್ಯವನ್ನು ಆರೋಪಿಸಿ ಮಗುವಿನ ಕುಟುಂಬಸ್ಥರು ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ.

    ಘಟನೆ ಹಿನ್ನೆಲೆ: ಮೇ.11 ರಂದು ಕೇರಳದ ಕೊಟ್ಟಾಯಂ ಮನಾರ್ಕಾಡ್ ಮೂಲದ ಎಬಿ – ಜಾನ್ಸಿ ದಂಪತಿಯ 8 ತಿಂಗಳ ಮಗು ಜೋಶ್ ಎಬಿಗೆ ಜ್ವರ ಕಾಣಿಸಿಕೊಂಡ ಕಾರಣ ಮಗುವನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ವಿಭಾಗದ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಗುವನ್ನು ಮೇ.29 ರಂದು ಐಸಿಯುಗೆ ದಾಖಲಿಸಿದ್ದಾರೆ. ರಾತ್ರಿ ವೈದ್ಯರು ಇನ್ಫ್ಲಿಕ್ಸಿಮಾಬ್ (infliximab injection) ಚುಚ್ಚು ಮದ್ದನ್ನು ನೀಡಿದ್ದಾರೆ. ಕೆಲ ಸಮಯದ ಬಳಿಕ ಮಗುವಿನ ಉಸಿರಾಟದಲ್ಲಿ ತೊಂದರೆ ಉಂಟಾಗಿದೆ. ಆ ಬಳಿಕ ಮಗುವಿನ ಆರೋಗ್ಯ ಹದಗೆಟ್ಟಿದೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಮಗುವಿಗೆ ಹೃದಯಾಘಾತವಾಗಿದೆ ಎಂದು ಹೇಳಿದ್ದಾರೆ.

    ಹೈಡೋಸ್ ಚುಚ್ಚು ಮದ್ದನ್ನು ನೀಡಿದ ಬಳಿಕ ಮಗುವಿನ ಆರೋಗ್ಯದ ನಿಗಾವಿಡಲು ಯಾವ ವೈದ್ಯರು ಬರಲಿಲ್ಲ. ಚುಚ್ಚು ಮದ್ದು ಹೃದಯಕ್ಕೆ ಪರಿಣಾಮವಿದ್ದರೂ ಅದನ್ನು ಆಸ್ಪತ್ರೆಯವರು ಕಡೆಗಣಿಸಿದ್ದಾರೆ. ಇದರಿಂದ ಮಗುವಿಗೆ ಹೃದಯಾಘಾತವಾಗಿದೆ ಎಂದು ಆಸ್ಪತ್ರೆಯ ನಿರ್ಲಕ್ಷ್ಯವನ್ನು ಆರೋಪಿಸಿ ಆರೋಗ್ಯ ಸಚಿವರಿಗೆ ಮೃತ ಮಗುವಿನ ಪೋಷಕರು ದೂರು ನೀಡಿದ್ದಾರೆ.

    ಮಗುವಿಗೆ ಗಂಭೀರ ಹೃದ್ರೋಗವಿತ್ತು, ಆಸ್ಪತ್ರೆಯಲ್ಲಿ ಯಾವುದೇ ವೈದ್ಯಕೀಯ ಲೋಪವಾಗಿಲ್ಲ. ಒಂದು ವೇಳೆ ಈ ಬಗ್ಗೆ ಅಧಿಕೃತವಾಗಿ ದೂರು ದಾಖಲಾದರೆ ನಾನು ವಿವರವಾಗಿ ಮಾಹಿತಿಯನ್ನು ನೀಡುತ್ತೇನೆ ಎಂದು ಆಸ್ಪತ್ರೆಯ ಸೂಪರಿಂಟೆಂಡೆಂಟ್ ಮಾಧ್ಯಮವೊಂದಕ್ಕೆ ಹೇಳಿದ್ದಾರೆ.

    Post Views: 201

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.