ಮುಲ್ಕಿ: ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾರಡ್ಕದಲ್ಲಿ ಹೆಜ್ಜೇನು ದಾಳಿ ನಡೆಸಿದ ಇಬ್ಬರು ಗಂಭೀರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಪೊಂಪೈ ಕಾಲೇಜು ವಿದ್ಯಾರ್ಥಿ ರಿಶೋನ್ ಹಾಗೂ ಮೇಸ್ತ್ರಿ ಕೆಲಸದ ಸಹಾಯಕ ಶಂಕರ ಅವರ ಮೇಲೆ ಹೆಜ್ಜೇನು ದಾಳಿ ಮಾಡಿದೆ. ಸ್ಥಳೀಯರಾದ ಸತೀಶ್ ಕೂಡಲೇ ಇವರನ್ನು ಕಟೀಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.